News18 ಕನ್ನಡ

400k Followers

Karnataka PUC Result: ಇಂದು ದ್ವಿತೀಯ ಪಿಯು ಫಲಿತಾಂಶ- ರಿಸಲ್ಟ್​ ನೋಡಲು ಇಲ್ಲಿ ಕ್ಲಿಕ್ ಮಾಡಿ.

20 Sep 2021.08:34 AM

ಕೊರೊನಾ (Coronavirus) ಕಾರಣ ದ್ವಿತೀಯ ಪಿಯು ಪರೀಕ್ಷೆ (2nd PUC)ರದ್ದಾಗಿದ್ದ ಪಿಯುಸಿ ಫಲಿತಾಂಶವನ್ನು ಪ್ರಥಮ ಪಿಯುಸಿ ಮತ್ತು ಎಸ್ ಎಸ್ ಎಲ್ ಸಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅಂಕ ನಿಗದಿಗೊಳಿಸಲು ತೀರ್ಮಾನಿಸಲಾಗಿತ್ತು.
ಕೋವಿಡ್‌ ಕುರಿತ ಎಲ್ಲಾ ಲೇಟೆಸ್ಟ್‌ ಅಪ್‌ಡೇಟ್ಸ್‌ ಓದಿಜತೆಗೆ ದ್ವಿತೀಯ ಪಿಯುಸಿ ಶೈಕ್ಷಣಿಕ ಚಟುವಟಿಕೆಗಳಿಗೆ ನಿಗದಿಪಡಿಸಿದ ಅಂಕಗಳು ಮತ್ತು ಕೃಪಾಂಕಗಳ ಆಧಾರದ ಮೇಲೆ ಅಂಕಗಳನ್ನು ನಿಗದಿಪಡಿಸಿ ಫಲಿತಾಂಶವನ್ನು ಘೋಷಣೆ ಮಾಡಲಾಗಿತ್ತು. ಆದರೆ ಹಲವಾರು ವಿದ್ಯಾರ್ಥಿಗಳು ಆ ಫಲಿತಾಂಶವನ್ನು ಒಪ್ಪಿರಲಿಲ್ಲ. ಅದನ್ನು ತಿರಸ್ಕರಿಸಿ ಪರೀಕ್ಷೆ ಬರೆದಿದ್ದರು. ಅದರ ಫಲಿತಾಂಶ ಇಂದು ಘೋಷಣೆಯಾಗಲಿದೆ.

ಸೆಪ್ಟೆಂಬರ್ ಹಾಗೂ ಆಗಸ್ಟ್ ಮೊದಲ ವಾರದಲ್ಲಿ ಪರೀಕ್ಷೆ ನಡೆದಿತ್ತು. ಅದರ ಫಲಿತಾಂಶವನ್ನು ಇಂದು 10. 30-ರ ಸುಮಾರಿಗೆ ಪ್ರಕಟ ಮಾಡಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಇಂದು ದ್ವಿತೀಯ ಪಿಯುಸಿ ಫಲಿತಾಂಶ ದಿನಾಂಕ ಘೋಷಣೆಯಾಗಲಿದ್ದು, ಪಿಯು ಬೋರ್ಡ್ ಫಲಿತಾಂಶದಲ್ಲಿ ಲಭ್ಯವಾಗಲಿದೆ. ವಿಧಾನಸೌಧದಲ್ಲಿ 10.30ಕ್ಕೆ ಪಿಯುಸಿ ಫಲಿತಾಂಶ ಕುರಿತು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಸುದ್ದಿಗೋಷ್ಟಿ ನಡೆಸಲಿದ್ದು, ಪಿಯು ಬೋರ್ಡ್ ನಿರ್ದೇಶಕಿ ಡಾ ಆರ್ ಸ್ನೇಹಲ್ ಉಪಸ್ಥಿತಿ ಇರಲಿದ್ದಾರೆ.

ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್ ನಂಬರ್ ಅನ್ನು ಇಟ್ಟುಕೊಂಡು http://karresults.nic.in ವೆಬ್​ಸೈಟ್​ನಲ್ಲಿ ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದು. ಇದಲ್ಲದೆ ವಿದ್ಯಾರ್ಥಿಗಳಿಗೆ ಎಸ್‌ಎಂಎಸ್ ಮೂಲಕ ದ್ವಿತೀಯ ಪಿಯುಸಿಯ ಫಲಿತಾಂಶ ಲಭ್ಯವಾಗಲಿದೆ .

: ಇಂದು ಸಿಇಟಿ ಫಲಿತಾಂಶ ಪ್ರಕಟ; ರಿಸಲ್ಟ್​ ನೋಡೋಕೆ ಹೀಗೆ ಮಾಡಿ

ಕಳೆದ ಬಾರಿ ನೀಡಿದ್ದ ಫಲಿತಾಂಶದಲ್ಲಿ ಬಹುಪಾಲು ಮಕ್ಕಳು ಉತ್ತಮ ಅಂಕ ಪಡೆದು ಪಾಸ್ ಆಗಿದ್ದರು. ಆದರೆ ಕೆಲವರಿಗೆ ಈ ಫಲಿತಾಂಶದ ಕುರಿತು ಅಸಮಾಧಾನವಿದ್ದ ಕಾರಣ ಸರ್ಕಾರ ಅಂಥಹ ಮಕ್ಕಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಿತ್ತು. ಕೊರೊನಾ ಕಾರಣಕ್ಕೆ ಪರೀಕ್ಷೆ ಇಲ್ಲದೆ ಪಾಸ್ ಮಾಡಲಾಗಿತ್ತು. ಈ ಫಲಿತಾಂಶ ಚಾಲೆಂಜ್ ಮಾಡಿ ಪರೀಕ್ಷೆ ಬರೆದಿದ್ದ ಪಿಯುಸಿ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

ದ್ವಿತೀಯ ಪಿಯುಸಿ ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆ ಸಹ ಬರೆದಿದ್ದರು ಒಟ್ಟು 18 ಸಾವಿರದ 413 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ರು. ಖಾಸಗಿ ಅಭ್ಯರ್ಥಿಗಳು 17,470 , ರಾಜ್ಯದ 187 ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಚಾಲೆಂಜ್ ಮಾಡಿ ಪರೀಕ್ಷೆ ಬರೆದಿದ್ದ 592 ವಿದ್ಯಾರ್ಥಿಗಳು ಹಾಗೂ 351 ವಿದ್ಯಾರ್ಥಿಗಳು ರಿಪಿಟರ್ಸ್ ಚಾಲೆಂಜ್ ಪರೀಕ್ಷೆ ಬರೆದಿದ್ದರು. ಒಟ್ಟು 18,413 ವಿದ್ಯಾರ್ಥಿಗಳು ದ್ವಿತೀಯ ಪಿಯು ಪರೀಕ್ಷೆ ಬರೆದಿದ್ರು ಎಂದು ಇಲಾಖೆ ಮಾಹಿತಿ ನೀಡಿದೆ.

ಮೊದಲ ಬಾರಿ ನೀಡಿದ ಹತ್ತನೇ ತರಗತಿಯಲ್ಲಿ ವಿಷಯವಾರು ಪಡೆದಿದ್ದ ಅಂಕಗಳ ಶೇ.45ರಷ್ಟು ಅಂಕ ಪ್ರಥಮ ಪಿಯುಸಿ ಪರೀಕ್ಷೆಯಲ್ಲಿ ಗಳಿಸರುವ ಅಂಕದಲ್ಲಿ ಶೇ.45ರಷ್ಟು ಅಂಕವನ್ನು ಪರಿಗಣನೆಗೆ ತೆಗೆದುಕೊಳ್ಳಲಾಗಿತ್ತು..

ಅಲ್ಲದೇ ದ್ವಿತೀಯ ಪಿಯುಸಿಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗೆ ಶೇ.10ರಷ್ಟು ಅಂಕ ಜೊತೆಗೆ ಪ್ರಥಮ ಪಿಯುಸಿಯಲ್ಲಿ ಪಡೆದ ಅಂಕಗಳಿಗೆ ಶೇ.5ರಷ್ಟು ಅಂಕಗಳನ್ನು ಪರಿಗಣನೆಗೆ ತೆಗೆದುಕೊಂಡು ಫಲಿತಾಂಶ ನೀಡಲಾಗಿತ್ತು.

ಇನ್ನು ಕಳೆದ ಬಾರಿ 6,66,497 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರು ಹಾಗೂ 3,35,138 ವಿದ್ಯಾರ್ಥಿಗಳು, 3,31,359 ವಿದ್ಯಾರ್ಥಿನಿಯರು ತೇರ್ಗಡೆ ಹೊಂದಿದ್ದಾರೆ. ಅದರಲ್ಲಿ 1,95,650 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್​ನಲ್ಲಿ ತೇರ್ಗಡೆ ಆಗಿದ್ದರು.

ಪುನರಾವರ್ತಿತ ಅಭ್ಯರ್ಥಿಗಳನ್ನು ಕೂಡ ಪಾಸ್ ಮಾಡಲಾಗಿತ್ತು, ಕನಿಷ್ಠ ಉತ್ತೀರ್ಣ ಅಂಕ ನೀಡಲಾಗಿತ್ತು. 4,50,706 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಡಿಸ್ಟಿಂಕ್ಷನ್ ಮತ್ತು ಫಸ್ಟ್ ಕ್ಲಾಸ್ - 1,95,650 , ದ್ವಿತೀಯ ದರ್ಜೆ , 1,47, 055ಯಲ್ಲಿ ಉತ್ತೀರ್ಣರಾಗಿದ್ದರು.

: ಸೋಷಿಯಲ್ ಮೀಡಿಯಾ ಶೂರ ಅಧಿಕಾರಿಗಳಿಗೆ ರಾಜ್ಯ ಸರ್ಕಾರದಿಂದ ಮೂಗುದಾರ

ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ತಮ್ಮ ತಮ್ಮ ಸರದಿ ಬಂದಾಗ ತಪ್ಪದೇ ಲಸಿಕೆ ಪಡೆಯಬೇಕು. ಈಗಿನ ಪರಿಸ್ಥಿತಿಯಲ್ಲಿ ಲಸಿಕೆ ಒಂದೇ ಸೋಂಕಿನ ವಿರುದ್ಧ ಹೋರಾಡುವ ಮಾರ್ಗವಾಗಿದೆ. ಅತ್ಯಗತ್ಯವಿದ್ದರೆ ಮಾತ್ರವೇ ಮನೆಯಿಂದ ಹೊರಗೆ ಹೋಗುವ ಅಭ್ಯಾಸ ರೂಢಿಸಿಕೊಳ್ಳಬೇಕು
Disclaimer

Disclaimer

This story is auto-aggregated by a computer program and has not been created or edited by Dailyhunt Publisher: News18 Kannada

#Hashtags