Saaksha TV

76k Followers

ವಾಯುಭಾರ ಕುಸಿತ | ಮುಂದಿನ ಐದು ದಿನ ವ್ಯಾಪಕ ಮಳೆ

24 Sep 2021.5:44 PM

ವಾಯುಭಾರ ಕುಸಿತ | ಮುಂದಿನ ಐದು ದಿನ ವ್ಯಾಪಕ ಮಳೆ rain Saaksha TV

ನವದೆಹಲಿ : ವಾಯುಭಾರ ಕುಸಿತದ ಪರಿಣಾಮ ಮುಂದಿನ ಐದು ದಿನಗಳ ಕಾಲ ರಾಜ್ಯದ ವಿವಿಧ ಭಾಗಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಸೆಪ್ಟೆಂಬರ್ 28ರವರೆಗೂ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಕರಾವಳಿ ಮತ್ತು ಉತ್ತರ ಒಳನಾಡಿನ ಕೆಲವು ಕಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ಕೊಪ್ಪಳ, ವಿಜಯಪುರ, ರಾಯಚೂರು, ಧಾರವಾಡ, ಹಾವೇರಿ ಜಿಲ್ಲೆಗಳ ಕೆಲವೆಡೆ ಮುಂದಿನ ಐದು ದಿನ ಭಾರಿ ವರ್ಷಧಾರೆಯಾಗಲಿದೆ.

ಇದಲ್ಲದೆ ಗುಜರಾತ್, ಪೂರ್ವ ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಕೊಂಕಣ ಪ್ರದೇಶದಲ್ಲಿ ಮುಂದಿನ ಐದು ದಿನಗಳ ಕಾಲ ವ್ಯಾಪಕ ಮಳೆಯಾಗುವ ಸಾಧ್ಯತೆಯಿರುವುದಾಗಿ ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಹತ್ತು ರಾಜ್ಯಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

Mahesh M Dhandu :
ಕಂಟೆಂಟ್ ಎಡಿಟರ್

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Saaksha TV

#Hashtags