Kannada News Now

1.8M Followers

Transfer of teachers : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಸಿಹಿಸುದ್ದಿ : ಶೀಘ್ರವೇ ವರ್ಗಾವಣೆ ಅಧಿಸೂಚನೆ

12 Oct 2021.06:29 AM

ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ (Transfer of teachers) ಶಿಕ್ಷಣ ಸಚಿವ ಬಿ. ಸಿ.

ನಾಗೇಶ್ (Minister B.C. Nagesh) ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಕಾಯ್ದೆ ತಿದ್ದುಪಡಿ ಅನುಸಾರ ಹೊಸದಾಗಿ ವರ್ಗಾವಣೆ ಪ್ರಕ್ರಿಯೆ ಅಧಿಸೂಚನೆ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ.

IPL 2021 : ಮತ್ತೆ ಆರ್'ಸಿಬಿ ಐಪಿಎಲ್ ಟ್ರೋಫಿ ಕನಸು ಭಗ್ನ : ಕೊಲ್ಕತ್ತಾ ವಿರುದ್ಧ ಸೋತ ಪಡೆ

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಬಿ.ಸಿ.ನಾಗೇಶ್, ವರ್ಗಾವಣೆಗಾಗಿ ಅರ್ಜಿ ಸಲ್ಲಿಸಿರುವ ಸುಮಾರು 72 ಸಾವಿರ ಶಿಕ್ಷಕರು ಕೌನ್ಸೆಲಿಂಗ್ ಗಾಗಿ ಕಾಯುತ್ತಿದ್ದಾರೆ. ಈಗಾಗಲೇ ಶಿಕ್ಷಕರ ವರ್ಗಾವಣೆ ನಿಟ್ಟಿನಲ್ಲಿ ಕ್ರಮ ಕೈಗೊಂಡಿರುವ ಸರ್ಕಾರ ಶೀಘ್ರವೇ ಅಧಿಸೂಚನೆ ಹೊರಡಿಸಲಿದೆ ಎಂದು ಹೇಳಿದ್ದಾರೆ.

Rain In Karnataka : ಬೆಂಗಳೂರು ಸೇರಿ ರಾಜ್ಯಾದ್ಯಂತ ಇನ್ನೂ 4 ದಿನ ಭಾರೀ ಮಳೆ : 18 ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್' ಘೋಷಣೆ

ಮೂರು ವರ್ಷಗಳಿಂದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ನಡೆದಿಲ್ಲ. ಶಿಕ್ಷಕರ ವರ್ಗಾವಣೆ ವಿವಿಧ ಕಾರಣಗಳಿಂದ ವಿಳಂಬವಾಗುತ್ತಿದೆ . ಕೋರ್ಟ್ ನಲ್ಲಿ ಪ್ರಕರಣ ಇತ್ಯರ್ಥವಾಗುವ ಸಾಧ್ಯತೆಯಿದೆ . ಕಾನೂನು ತೊಡಕು ಆಗಬಾರದು ಎಂಬ ಕಾರಣಕ್ಕೆ ‌ ವರ್ಗಾವಣೆ ಪ್ರಕ್ರಿಯೆಗೆ ಶೀಘ್ರವೇ ಅಧಿಸೂಚನೆ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ.

BIGG NEWS : ರಾಜ್ಯದಲ್ಲಿ 1-5 ತರಗತಿ ಆರಂಭದ ಕುರಿತಂತೆ ಶಿಕ್ಷಣ ಸಚಿವರಿಂದ ಮಹತ್ವದ ಮಾಹಿತಿ



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags