Kannada News Now

1.8M Followers

BIGG NEWS: ರಾಜ್ಯ 'ಸರ್ಕಾರಿ ನೌಕರ'ರಿಗೆ ದೀಪಾವಳಿ ಗಿಫ್ಟ್: ತುಟ್ಟಿಭತ್ಯೆ(DA) ಶೇ.24.50ಕ್ಕೆ ಹೆಚ್ಚಿಸಿ ಸರ್ಕಾರ ಅಧಿಕೃತ ಆದೇಶ

27 Oct 2021.2:51 PM

ವರದಿ: ವಸಂತ ಬಿ ಈಶ್ವರಗೆರೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ( Karnataka Government Employees ) ತುಟ್ಟಿಭತ್ಯೆಯನ್ನು ( DA Hike ) ಶೇ.21.50 ರಿಂದ ಶೇ.24.50ರವರೆಗೆ ಹೆಚ್ಚಿಸಿ ರಾಜ್ಯ ಸರ್ಕಾರ ಅಧಿಕೃತವಾಗಿ ಆದೇಶ ಹೊರಿಡಿಸಿದೆ. ಈ ಮೂಲಕ ರಾಜ್ಯದ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ.

ಈ ಕುರಿತಂತೆ ಆರ್ಥಿಕ ಇಲಾಖೆಯ ( Finance Department ) ಸರ್ಕಾರದ ಉಪ ಕಾರ್ಯದರ್ಶಿ ಉಮಾ.ಕೆ ಅವರು ತುಟ್ಟಿಭತ್ಯೆಯ ( ( Dearness Allowance ) ದರಗಳ ಪರಿಷ್ಕರಣೆಯ ನಡವಳಿಯನ್ನು ಹೊರಡಿಸಿದ್ದು, 2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ ಜುಲೈ 1, 2021ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇ.21.50 ರಿಂದ ಶೇ.24.50ಗೆ ಪರಿಷ್ಕರಿಸಿ ಮಂಜೂರು ಮಾಡಲು ಸರ್ಕಾರವು ಹರ್ಷಿಸುತ್ತದೆ ಎಂದಿದ್ದಾರೆ.

ಇನ್ನು ರಾಜ್ಯ ಸರ್ಕಾರದ ನಿವೃತ್ತಿ ವೇತನದಾರರು, ಕುಟುಂಬ ನಿವೃತ್ತಿ ವೇತನದಾರರಿಗೆ ಮತ್ತು ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನವನ್ನು ಪಡೆಯುತ್ತಿರುವಂತಹ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು, ಕುಟುಂಬ ನಿವೃತ್ತಿ ವೇತನದಾರರಿಗೂ ಸಹ ದಿನಾಂಕ 01 ಜುಲೈ 2021ರಿಂದ ಜಾರಿಗೆ ಬರುವಂತೆ ಹಾಲಿ ಲಭ್ಯವಿರುವ ತುಟ್ಟಿಭತ್ಯೆಯ ದರಗಳನ್ನು ಮೂಲ ನಿವೃತ್ತಿ ವೇತನ, ಕುಟುಂಬ ನಿವೃತ್ತಿ ವೇತನದ ಪ್ರಸಕ್ತ ಶೇ.21.50 ರಿಂದ ಶೇ.24.50ಕ್ಕೆ ಹೆಚ್ಚಿಸಿ ಮಂಜೂರು ಮಾಡಲು ಸಹ ಸರ್ಕಾರವು ಹರ್ಷಿಸುತ್ತದೆ.

ಯುಜಿಸಿ, ಎಐಸಿಟಿಇ, ಐಸಿಎಆರ್ ವೇತನ ಶ್ರೇಣಿಗಳ ನಿವೃತ್ತ ನೌಕರರಿಗೂ ಸಹ ಈ ಆದೇಶಗಳು ಅನ್ವಯಿಸುತ್ತವೆ. ಸರ್ಕಾರದ ಮತ್ತು ಜಿಲ್ಲಾ ಪಂಚಾಯ್ತಿಗಳ ಪೂರ್ಣಾವಧಿ ನೌಕರರಿಗೆ, ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ವರ್ಕ್ ಚಾರ್ಟ್ ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯಾನುದಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ವಿಶ್ವವಿದ್ಯಾಲಯಗಳಲ್ಲಿ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ನೌಕರರುಗಳಿಗೆ ಈ ಆದೇಶ ಅನ್ವಯಿಸುತ್ತದೆ. ಈ ಆದೇಶದ ಮೇರೆಗೆ ಲಭ್ಯವಿರುವ ತುಟ್ಟಿಭತ್ಯೆಯನ್ನು ನಗದಾಗಿ ಪಾವತಿ ಮಾಡುವುದು ಎಂದು ತಿಳಿಸಿದ್ದಾರೆ.



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags