Kannada News Now

1.8M Followers

BIG BREAKING NEWS: ನ.8ರಿಂದ ರಾಜ್ಯದ ಎಲ್ಲಾ ಶಾಲೆಗಳಲ್ಲಿ 'LKG, UKG ತರಗತಿ' ಆರಂಭಕ್ಕೆ 'ರಾಜ್ಯ ಸರ್ಕಾರ' ಗ್ರೀನ್ ಸಿಗ್ನಲ್

04 Nov 2021.4:53 PM

ವರದಿ: ಲೀಲಾವತಿ ವಸಂತ ಬಿ ಈಶ್ವರಗೆರೆ

ಬೆಂಗಳೂರು: ದಿನಾಂಕ 08-11-2021ರಿಂದ ಜಾರಿಗೆ ಬರುವಂತೆ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ ತಮ್ಮ ದೈನಂದಿನ ವೇಳಾಪಟ್ಟಿಯಂತೆ ಎಲ್ ಕೆಜಿ ಮತ್ತು ಯುಕೆಜಿ ತರಗತಿಗಳನ್ನು ( LKG and UKG School Reopen ) ಆರ್ಧ ದಿನ ಭೌತಿಕ ತರಗತಿಗಳನ್ನು ಆರಂಭಿಸಲು ರಾಜ್ಯ ಸರ್ಕಾರ ( Karnataka Government ) ಗ್ರೀನ್ ಸಿಗ್ನಲ್ ನೀಡಿದೆ.

ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ರಾಜ್ಯದಲ್ಲಿ 2021-22ನೇ ಶೈಕ್ಷಣಿಕ ಸಾಲಿನಲ್ಲಿ ಶಾಲೆಗಳನ್ನು ಭೌತಿಕವಾಗಿ ಪ್ರಾರಂಭಿಸುವ ಕುರಿತಂತೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಆರೋಗ್ಯ ಸಚಿವರು, ಇಲಾಖೆಯ ಕೋವಿಡ್ ತಾಂತ್ರಿಕ ಸಹಾ ಸಮಿತಿಯ ಸದಸ್ಯರು, ಹಾಗೂ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಚರ್ಚಿಸಿ ದಿನಾಂಕ 23-08-2021 ರಿಂದ 9 ರಿಂದ 10ನೇ ತರಗತಿ ಆರಂಭಿಸಲಾಗಿತ್ತು. ಆನಂತ್ರ ದಿನಾಂಕ 06-09-2021ರಲ್ಲಿ 6 ರಿಂದ 8ನೇ ತರಗತಿ ಪ್ರಾರಂಭಿಸಲಾಗಿತ್ತು. ಈ ಬಳಿಕ ದಿನಾಂಕ 04-10-2021ರಿಂದ 6 ರಿಂದ 10ನೇ ತರಗತಿಗಳನ್ನು ದೈನಂದಿನ ಪೂರ್ಣ ಅವಧಿಗೆ ಪ್ರಾರಂಭಿಸಲಾಗಿತ್ತು. 1 ರಿಂದ 5ನೇ ತರಗಳನ್ನು ದಿನಾಂಕ 25-10-2021ರಿಂದ ಅರ್ಧ ದಿನ ಭೌತಿಕವಾಗಿ ಪ್ರಾರಂಭಿಸಿ, ದಿನಾಂಕ 02-11-2021 ರಿಂದ 1 ರಿಂದ 5ನೇ ತರಗತಿಗಳನ್ನು ಪೂರ್ಣ ಅವಧಿಗೆ ಭೌತಿಕವಾಗಿ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಪ್ರಾರಂಭಿಸಲಾಗಿತ್ತು.

ಈಗಾಗಲೇ ರಾಜ್ಯಾದ್ಯಂತ ಅಂಗವಾಡಿ ಕೇಂದ್ರಗಳನ್ನು ದಿನಾಂಕ 08-11-2021ರಿಂದ ಭೌತಿಕವಾಗಿ ಪ್ರಾರಂಭಿಸಲು ಆದೇಶಿಸಿರುವ ಹಿನ್ನಲೆಯಲ್ಲಿ, ರಾಜ್ಯದಲ್ಲಿನ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಶಾಲೆಗಳಲ್ಲಿನ ಹಾಗೂ ಪೂರ್ವ ಪ್ರಾಥಮಿಕ ಶಾಲೆಗಳಲ್ಲಿನ ಎಲ್ ಕೆ ಜಿ ಮತ್ತು ಯುಕೆಜಿ ತರಗತಿಗಳನ್ನು ಪ್ರಾರಂಭಿಸಲು ಶಾಲೆಗಳ ಎಲ್ಲಾ ಶಿಕ್ಷಕರು, ವಿದ್ಯಾರ್ಥಿಗಳಿಗೆ ಅನ್ವಯಿಸುವಂತೆ, ಈ ಕೆಳಕಂಡ ಕ್ರಮವಹಿಸಲು ಸೂಚಿಸಿದೆ.

  • ದಿನಾಂಕ 08-11-2021ರಿಂದ ಅರ್ಧ ದಿನ ಎಲ್ಲಾ ಶಾಲೆಗಳಲ್ಲಿ ಎಲ್ ಕೆ ಜಿ ಮತ್ತು ಯುಕೆಜಿ ತರಗತಿಗಳನ್ನು ಪ್ರಾರಂಭಿಸುವುದು.
  • ಕೋವಿಡ್-19ರ ಸೋಂಕಿನ ಪ್ರಮಾಣ ಶೇ.2ಕ್ಕಿಂತ ಕಡಿಮೆ ಇರುವ ತಾಲೂಕುಗಳಲ್ಲಿ ಮಾತ್ರ ಸದರಿ ತರಗತಿಗಳನ್ನು ಭೌತಿಕವಾಗಿ ಪ್ರಾರಂಭಿಸುವುದು.
  • ಶಾಲೆ ಪ್ರಾರಂಭಕ್ಕೂ ಮುನ್ನಾ ಸೋಂಕು ನಿವಾರಕ ದ್ರಾವಣಗಳಿಂದ ಶುದ್ಧೀಕರಿಸುವುದು, ಸ್ಯಾನಿಟೈಸ್ ಮಾಡುವುದು.
  • ಶಾಲೆಗಳಲ್ಲಿ ಹಾಜರಾಗುವ ಎಲ್ ಕೆ ಜೆ ಮತ್ತು ಯುಕೆಜಿ ತರಗತಿಯ ಎಲ್ಲಾ ವಿದ್ಯಾರ್ಥಿಗಳು ಪೋಷಕರಿಂದ ಒಪ್ಪಿಗೆ ಪತ್ರ ಕಡ್ಡಾಯವಾಗಿ ತರಬೇಕು.
  • ಶಾಲೆಗೆ ಹಾಜರಾಗುವ ಎಲ್ಲಾ ಶಿಕ್ಷಕರು, ಇತರೆ ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಎಚ್ಚರಿಕೆ ವಹಿಸುವುದು.
  • ಶಿಕ್ಷಕರು ಎರಡು ಡೋಸ್ ಲಸಿಕೆ ಹಾಕಿಸಿಕೊಂಡಿರಬೇಕು.
  • ಮಕ್ಕಳಿಗೆ ಮನೆಯಿಂದಲೇ ಉಪಹಾರ, ಕುಡಿಯುವ ಶುದ್ಧನೀರನ್ನು ಕಳುಹಿಸುವಂತೆ ಎಲ್ಲಾ ಪೋಷಕರಿಗೆ ಸೂಚಿಸುವುದು.
  • ಶಾಲೆಗಳಲ್ಲಿ ಮಕ್ಕಳಿಗೆ ಕುಡಿಯಲು ಬಿಸಿನೀರು ವ್ಯವಸ್ಥೆ ಮಾಡುವುದು.

ಪೂರ್ವ ಪ್ರಾಥಮಿಕ ಶಾಲೆಗಳಲ್ಲಿನ ಎಲ್ ಕೆ ಜೆ ಮತ್ತು ಯುಕೆಜಿ ತರಗತಿಗಳ ನಿರ್ವಹಣೆಗೆ ಸಲಹಾತ್ಮಕ ವೇಳಾಪಟ್ಟಿ

  • ಸೋಮವಾರದಿಂದ ಶುಕ್ರವಾರ - ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 3.30ರವರೆಗೆ - ಎಲ್ ಕೆ ಜಿ ಮತ್ತು ಯುಕೆಜಿ ತರಗತಿಗಳನ್ನು ಆರಂಭಿಸುವಂತೆ ಸೂಚಿಸಿದೆ.



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags