Kannada News Now

1.8M Followers

BIGG NEWS : 1,242 ಸಹಾಯಕ ಪ್ರಾಧ್ಯಾಪಕ ಹುದ್ದೆ ಅರ್ಜಿ ಸಲ್ಲಿಕೆ ನಿಯಮ ಸಡಿಲ : ಇಲ್ಲಿದೆ ಸಂಪೂರ್ಣ ಮಾಹಿತಿ

22 Oct 2021.08:35 AM

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (Karnataka Examination Authority) 1,242 ಸಹಾಯಕ ಪ್ರಾಧ್ಯಾಪಕರ (Assistant Professor) ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ್ದ ನಿಯಮಗಳಲ್ಲಿ ಕೊಂಚ ಸಡಿಲಿಕೆ ನೀಡಲಾಗಿದೆ.

ಕೇರಳದಲ್ಲಿ ಮತ್ತೆ ಭಾರಿ ಮಳೆ ಸಾಧ್ಯತೆ : ಎಂಟು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಈ ಸಂಬಂಧ ಸುತ್ತೊಲೆ ಹೊರಡಿಸಿದ್ದು, 2021 ರ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡಿ ಉತ್ತೀರ್ಣರಾದ ಅಭ್ಯರ್ಥಿಗಳು ನೆಟ್, ಕೆ-ಸೆಟ್ ಫಲಿತಾಂಶಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳು ಸರ್ಕಾರಿ ಹುದ್ದೆಯಲ್ಲಿದ್ದು, ಅರ್ಜಿ ಸಲ್ಲಿಸಲು ನಿರಾಪೇಕ್ಷಣಾ ಪತ್ರ ಪಡೆಯದ ಅಭ್ಯರ್ಥಿಗಳು ಸಹ ಅರ್ಜಿ ಸಲ್ಲಿಸಲು ಅರ್ಹರು ಎಂದು ಕೆಇಎ ತಿಳಿಸಿದೆ.

ಭಜರಂಗದಳ ಜಿಲ್ಲಾ ಸಂಚಾಲಕನ ಮೇಲೆ ಹಲ್ಲೆ ಪ್ರಕರಣ : ಹಿಂದೂಪರ ಸಂಘಟನೆಗಳಿಂದ ಇಂದು ತುಮಕೂರು ಬಂದ್ ಗೆ ಕರೆ

ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಈ ಹಿಂದೆ ನೆಟ್, ಸ್ಲೆಟ್ ಪಾಸಾದವರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿದ್ದರು. ಆದರೆ, ಬಹುಸಂಖ್ಯಾತ ಅಭ್ಯರ್ಥಿಗಳು ಇದಕ್ಕೆ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಕೆಗೆ ನಿಗದಿ ಪಡಿಸಿದ್ದ ನಿಯಮವನ್ನು ಸಡಿಲಗೊಳಿಸಲಾಗಿದೆ.



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags