Kannada News Now

1.8M Followers

ಅಲ್ವಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ವಿದ್ಯಾಸಿರಿ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

07 Nov 2021.08:50 AM

ಹಾವೇರಿ: ಪ್ರಸಕ್ತ 2021-22ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ವಿದ್ಯಾಸಿರಿ ಯೋಜನೆಯಡಿ ( Vidyasiri Scheme ) ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲೆಯ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧರು ಪಾರ್ಸಿ ವಿದ್ಯಾರ್ಥಿಗಳಿಂದ ಸರ್ಕಾರಿ ಅಥವಾ ಖಾಸಗಿ ಅನುದಾನಿತ ವಿದ್ಯಾರ್ಥಿನಿಲಯಗಳಗ ಪ್ರವೇಶ ಸಿಗದಿರುವ ವಿದ್ಯಾರ್ಥಿಗಳು ( Vidyasiri Scholarship ) ಅರ್ಜಿ ಸಲ್ಲಿಸಬಹುದು.

ಅರ್ಹ ವಿದ್ಯಾರ್ಥಿಗಳು ದಾಖಲಾತಿಗಳನ್ನು ಸಂಬಂಧಿಸಿದ ಪ್ರಾಂಶುಪಾಲರಿಂದ ದೃಢೀಕರಿಸಿ ಆನ್‍ಲೈನ್ ಜಾಲತಾಣ dom.karnataka.gov.in/haveri/public ನಲ್ಲಿ ಅರ್ಜಿ ಸಲ್ಲಿಸಬೇಕು. ಪ್ರಾಂಶುಪಾಲರಿಂದ ದೃಢೀಕಲಿಸಿದ ದಾಖಲಾತಿಗಳು ಹಾಗೂ ಆನ್‍ಲೈನ್‍ನಲ್ಲಿ ಸಲ್ಲಸಿದ ಅರ್ಜಿಯ ಪ್ರತಿಯನ್ನು ದಿನಾಂಕ 30-11-2021 ಒಳಗಾಗಿ ಜಿಲ್ಲಾ ಕಚೇರಿಗೆ ಹಾಗೂ ಆಯಾ ತಾಲ್ಲೂಕಿಗೆ ಸಂಬಂಧಿಸಿದ ತಾಲೂಕು ಮಾಹಿತಿ ಕೇಂದ್ರಗಳಲ್ಲಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಹಾವೇರಿ, ಬ್ಯಾಡಗಿ, ರಾಣೇಬೆನ್ನೂರ, ಹಾನಗಲ್, ಹಿರೇಕೆರೂರ, ಶಿಗ್ಗಾಂವ ಮತ್ತು ಸವಣೂರ ತಾಲೂಕು ಮಾಹಿತಿ ಕೇಂದ್ರಗಳಿಗೆ ಹಾಗೂ ಕಚೇರಿಯ ದೂರವಾಣಿ ಸಂಖ್ಯೆ 08375-234505 ಸಂಪರ್ಕಿಸಲು ಕೋರಲಾಗಿದೆ.



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags