Kannada News Now

1.8M Followers

Good News : ರಾಜ್ಯದ ಗ್ರಾಮೀಣ ಜನತೆಗೆ ಮತ್ತೊಂದು ಸಿಹಿಸುದ್ದಿ : ಇನ್ಮುಂದೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಜಾತಿ, ಆದಾಯ, ಸಂಧ್ಯಾ ಸುರಕ್ಷಾ ಪ್ರಮಾಣ ಪತ್ರ

20 Dec 2021.06:55 AM

ಹಾವೇರಿ : ರಾಜ್ಯ ಸರ್ಕಾರವು ಗ್ರಾಮೀಣ ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಜಾತಿ ಮತ್ತು ಆದಾಯ ಪ್ರಮಾಣಪತ್ರ, ಸಂಧ್ಯಾ ಸುರಕ್ಷಾ ಸೇರಿದಂತೆ ಹಲವಾರು ಸೇವೆಗಳನ್ನು ತಾಲ್ಲೂಕು ಕಚೇರಿಗಳಿಂದ ಬೇರ್ಪಡಿಸಿ ಗ್ರಾಮಪಂಚಾಯ್ತಿ ಮಟ್ಟದಲ್ಲಿ ಲಭ್ಯವಾಗುವಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಈ ಬದುಕು ಶಾಶ್ವತವಲ್ಲ : ಎಷ್ಟು ದಿನ ಬದುಕಿರುತ್ತೀವೋ ಗೊತ್ತಿಲ್ಲ: ಭಾವುಕರಾದ ಮುಖ್ಯಮಂತ್ರಿ ಬೊಮ್ಮಾಯಿ

ಹಾವೇರಿ ಜಿಲ್ಲೆಯ ಶಿಗ್ಗಾಂವ್‍ನ ಬಿಸನಹಳ್ಳಿ ಗ್ರಾಮದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಗ್ರಾಮೀಣ ಭಾಗದ ಜನರು ಕೆಲವು ಸೇವೆಗಳಿಗಾಗಿ ತಾಲ್ಲೂಕು ಕೇಂದ್ರಕ್ಕೆ ಹೋಗುವುದನ್ನು ತಪ್ಪಿಸುವ ಸಲುವಾಗಿ 2022ರ ಗಣರಾಜ್ಯೋತ್ಸವ ದಿನದಿಂದ ಗ್ರಾಮಪಂಚಾಯಿತಿಗಳಲ್ಲಿ ಜಾತಿ, ಆದಾಯ ಪ್ರಮಾಣ ಪತ್ರ, ಸಂಧ್ಯಾ ಸುರಕ್ಷಾ ಸೇರಿದಂತೆ ಹಲವಾರು ಸೇವೆಗಳನ್ನು ನೀಡಲು ಸಿದ್ದತೆ ನಡೆಸಲಾಗಿದ್ದು, ಅದಕ್ಕೆ ಪೂರ್ವಭಾವಿಯಾಗಿ ಇಂಟರ್‍ನೆಟ್ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಹೇಳಿದರು.

BIG NEWS:ಉತ್ತರ ಪ್ರದೇಶದಲ್ಲಿ ಆರು ತಿಂಗಳ ಕಾಲ ಮುಷ್ಕರ ನಡೆಸದಂತೆ ನಿಷೇಧ ಹೇರಿದ ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ್ | Ban Strikes

ಅಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ರಾಜ್ಯಾದ್ಯಂತ 750 ಗ್ರಾಮಪಂಚಾಯ್ತಿಗಳನ್ನು ಅಮೃತ ಯೋಜನೆಯಡಿ ಸಮಗ್ರವಾಗಿ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗಿದೆ. 2022ರ ಮಾರ್ಚ್ ವೇಳೆ ಈ ಪಂಚಾಯ್ತಿಗಳಲ್ಲಿ ಶುದ್ದ ಕುಡಿಯುವ ನೀರು, ರಸ್ತೆ, ವಸತಿ ಯೋಜನೆ ಜಾರಿ ಸೇರಿದಂತೆ ಸಮಗ್ರ ಅಭಿವೃದ್ಧಿಯಾಗಬೇಕು. ಅಲ್ಲದೆ 75 ಸಾವಿರ ಗ್ರಾಮೀಣ ಭಾಗದ ಯುವಕರಿಗೆ ಕೌಶಲ್ಯ ತರಬೇತಿ, 7500 ಸ್ತ್ರೀ ಶಕ್ತಿ ಸಂಘಗಳಿಗೆ ಪ್ರೋತ್ಸಾಹ ಧನ ಸೇರಿದಂತೆ ಹಲವು ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದರು.

BIGG NEWS : ಸಹಾಯಕ ಪ್ರಾಧ್ಯಾಪಕ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್: ಈ ಹೊಸ ನಿಯಮದಿಂದ ಕೈತಪ್ಪಲಿದೆ ಹುದ್ದೆ!

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags