Kannada News Now

1.8M Followers

ವರ್ಗಾವಣೆಯ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಬಿಗ್ ಶಾಕ್ : ಮತ್ತೆ ಕೌನ್ಸೆಲಿಂಗ್ ಮುಂದೂಡಿಕೆ

24 Dec 2021.07:08 AM

ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿದ್ದ ಪ್ರೌಢಶಾಲೆ ಶಿಕ್ಷಕರಿಗೆ ಶಿಕ್ಷಣ ಇಲಾಖೆ ಬಿಗ್ ಶಾಕ್ ನೀಡಿದ್ದು, ಪ್ರೌಢಶಾಲೆ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕವಾಗಿ ಮುಂದೂಡಲಾಗಿದೆ.

Coal India Recruitment: ಕೋಲ್ ಇಂಡಿಯಾ ಲಿಮಿಟೆಡ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | JobsAlert

ಕರ್ನಾಟಕ ಆಡಳಿತ ನ್ಯಾಯ ಮಂಡಳಿ (KAT) ಪ್ರೌಢಶಾಲೆ ಶಿಕ್ಷಕರ ವರ್ಗಾವಣೆಗೆ ತಡೆಯಾಜ್ಞೆ ನೀಡಿದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಕೌನ್ಸೆಲಿಂಗ್ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.

ಡಿಸೆಂಬರ್ 24 ರಿಂದ 2022 ರ ಜನವರಿ 10 ರವರೆಗೆ 2020-21 ನೇ ಸಾಲಿನ ಸರ್ಕಾರಿ ಪ್ರೌಢಶಾಲೆ ಸಹಶಿಕ್ಷಕರ ವಿಭಾಗದ ಹೊರಗಿನ ಕೋರಿಕೆ ವರ್ಗಾವಣೆ ಕೌನ್ಸಿಲಿಂಗ್ ನಡೆಸಬೇಕಿತ್ತು.

ಜನ್ ಧನ್ ಖಾತೆದಾರರಿಗೆ ಸಿಹಿಸುದ್ದಿ : ಖಾತೆಯಲ್ಲಿ ಹಣವಿಲ್ಲದಿದ್ರೂ ಸಿಗಲಿದೆ 10 ಸಾವಿರ ರೂ, ಇಲ್ಲಿದೆ ಮಾಹಿತಿ

ಕರ್ನಾಟಕ ಆಡಳಿತ ನ್ಯಾಯ ಮಂಡಳಿ ಮೈಸೂರು ವಿಭಾಗದ ಒಳಗಿನ ಕೋರಿಕೆ ವರ್ಗಾವಣೆಗೆ ತಡೆಯಾಜ್ಞೆ ನೀಡಿರುವುದರಿಂದ ತಾತ್ಕಾಲಿಕವಾಗಿ ಮೈಸೂರು ವಿಭಾಗದ ವರ್ಗಾವಣೆ ಮುಂದೂಡಲಾಗಿದೆ. ಕೌನ್ಸೆಲೀಗ್ ದಿನಾಂಕವನ್ನು ಮುಂದಿನ ದಿನಗಳಲ್ಲಿ ಪ್ರಕಟಿಸುವುದಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

BIGG NEWS : ದೇಶದಲ್ಲಿ ಒಮಿಕ್ರಾನ್ ಆತಂಕ : ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ರಾಜ್ಯಗಳಿಗೆ ಕೇಂದ್ರದಿಂದ ತಂಡ : ಪ್ರಧಾನಿ ಮೋದಿ

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags