Kannada News Now

1.8M Followers

BIG BREAKING NEWS: ರಾಜ್ಯದಲ್ಲಿ ಕೊರೋನಾ ಹೆಚ್ಚಾದ್ರೇ ಶಾಲೆ ಬಂದ್ - ಶಿಕ್ಷಣ ಸಚಿವ ಬಿ.ಸಿ.ನಾಗೇಶ್

06 Dec 2021.11:17 AM

ಬೆಂಗಳೂರು: ರಾಜ್ಯದಲ್ಲಿ ಒಮಿಕ್ರಾನ್ ವೈರಸ್ ( Omicron Variant ) ಕಾಲಿಟ್ಟ ನಂತ್ರ, ಪೋಷಕರು ಮಕ್ಕಳನ್ನು ಶಾಲೆಗೆ ಕಳಿಸೋದಕ್ಕೆ ಹಿಂದೆ ಮುಂದೆ ನೋಡುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಕೊರೋನಾ ಹೆಚ್ಚಾದ್ರೆ ಶಾಲೆ ಬಂದ್ ( School Close ) ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್ ( Education Minister BC Nagesh ) ತಿಳಿಸಿದ್ದಾರೆ.

Dikshi flips to Ishwarappa: ಈಶ್ವರಪ್ಪಗೆ ಡಿಕೆಶಿ ತಿರುಗೇಟು

ವಿಧಾನಸೌಧದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯದಲ್ಲಿನ ಕೊರೋನಾ ಸೋಂಕಿನ ( Coronavirus ) ತೀವ್ರತೆ ಬಗ್ಗೆ ತಜ್ಞರಿಂದ ಪ್ರತಿ ದಿನ ವರದಿಯನ್ನು ಪಡೆಯುತ್ತಿದ್ದೇವೆ. ಕೋವಿಡ್ ತೀವ್ರತೆಯನ್ನು ಆಧರಿಸಿ, ಶಾಲಾ-ಕಾಲೇಜು ಮುಚ್ಚೋ ( School and College Bund ) ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂಬುದಾಗಿ ತಿಳಿಸಿದ್ದಾರೆ.

BIG BREAKING NEWS: ಮತ್ತೆ 'ಮಂತ್ರಿ ಮಾಲ್'ಗೆ ಬೀಗ ಜಡಿದ ಬಿಬಿಎಂಪಿ

ಸದ್ಯಕ್ಕೆ ತಜ್ಞರು ನೀಡುತ್ತಿರುವಂತ ವರದಿಯ ಪ್ರಕಾರ ಯಾರೂ ಆತಂಕ ಪಡುವಂತೆ ಕೊರೋನಾ ತೀವ್ರತೆ ಇಲ್ಲ. ಕೊರೋನಾ ತೀವ್ರತೆ ಆಧರಿಸಿ, ಮುಂದಿನ ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ. ವಸತಿ ಶಾಲೆಗಳಲ್ಲಿ ಕೊರೋನಾ ಹೆಚ್ಚಾದ ಬಗ್ಗೆ ಗಮನಕ್ಕೆ ಬಂದಿದೆ. ಆ ಬಗ್ಗೆ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ತಾಂತ್ರಿಕ ಸಲಹಾ ಸಮಿತಿ ಸದಸ್ಯರೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ರಾಜ್ಯದಲ್ಲಿ ಸದ್ಯಕ್ಕೆ ಕೊರೋನಾ ತೀವ್ರತೆ ಇಲ್ಲ. ಪೋಷಕರು ಆತಂಕ ಪಡಬಾರದು ಎಂದರು.

Omicron Variant : ಕೊರೊನಾ ರೂಪಾಂತರ ಒಮಿಕ್ರಾನ್ ವೈರಸ್ ತೀವ್ರತೆ ಕಡಿಮೆ : ಆರೋಗ್ಯ ಸಚಿವ ಡಾ.ಕೆ. ಸುಧಾಕರ್

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags