Oneindia

1.1M Followers

ಕರ್ನಾಟಕದಲ್ಲಿ 15,000 ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ಭರ್ತಿ: ಶೀಘ್ರವೇ ಅಧಿಸೂಚನೆ

11 Dec 2021.3:26 PM

ಬೆಂಗಳೂರು, ಡಿಸೆಂಬರ್ 11: ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. 2021-22ರ ಶೈಕ್ಷಣಿಕ ವರ್ಷದಲ್ಲಿ ಒಟ್ಟು 15,000 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ತೀರ್ಮಾನಿಸಲಾಗಿದ್ದು, ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

ರಾಜ್ಯದಲ್ಲಿ ಶಿಕ್ಷಕರ ಕೊರತೆ ನೀಗಿಸಲು ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ತಾತ್ಕಾಲಿಕವಾಗಿ 23,078 ಅತಿಥಿ ಶಿಕ್ಷಕರ ನೇಮಕಕ್ಕೆ ಈಗಾಗಲೇ ಆದೇಶ ಹೊರಡಿಸಲಾಗಿದೆ. ಇದರ ಜೊತೆಗೆ ಹೆಚ್ಚುವರಿ 4,000 ಅತಿಥಿ ಉಪನ್ಯಾಸಕರಿಂದ ಸೇವೆ ಪಡೆದುಕೊಳ್ಳಲು ನಿರ್ಧರಿಸಲಾಗಿದೆ. 2022ರ ಸಾಲಿನ ಶೈಕ್ಷಣಿಕ ಸಾಲಿನ ಅಂತ್ಯದವರೆಗೆ ಅತಿಥಿ ಶಿಕ್ಷಕರ ಸೇವೆ ಪಡೆದುಕೊಳ್ಳಲಾಗುತ್ತದೆ.

ಸರಕಾರಿ ಶಾಲೆಗಳಿಗೆ 23,078 ಅತಿಥಿ ಶಿಕ್ಷಕರ ನೇಮಕಕ್ಕೆ ಆದೇಶ

ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 18,000 ಅತಿಥಿ ಶಿಕ್ಷಕರು ಮತ್ತು ಪ್ರೌಢ ಶಾಲೆಗಳಿಗೆ 5,078 ಅತಿಥಿ ಶಿಕ್ಷಕರ ನೇಮಕ ಮಾಡಿಕೊಳ್ಳಲಾಗುತ್ತದೆ. ಈ ಸಂಬಂಧ ನವೆಂಬರ್ 4ರಂದು ಆದೇಶ ಹೊರಡಿಸಲಾಗಿದ್ದು, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಮ್ಮ ಟ್ವಿಟರ್ ಖಾತೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಒಟ್ಟು 15,000 ಶಿಕ್ಷಕರ ಭರ್ತಿಗೆ ನಿರ್ಧಾರ:

2021-22ರ ಶೈಕ್ಷಣಿಕ ವರ್ಷದಲ್ಲಿ ಒಟ್ಟು 15,000 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಮ್ಮ ಟ್ವಿಟರ್ ಪೋಸ್ಟ್ ಮೂಲಕ ತಿಳಿಸಿದ್ದಾರೆ. ಅವರು ಮಾಡಿರುವ ಟ್ವೀಟ್ ಪ್ರಕಾರ, ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ ಪದವೀಧರ ಪ್ರಾಥಮಿಕ ಶಾಲಾ (6 ರಿಂದ 8 ) ಶಿಕ್ಷಕರ 10 ಸಾವಿರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು.

ಕಲ್ಯಾಣ ಕರ್ನಾಟಕ ವೃಂದದ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ 5 ಸಾವಿರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ. ಕೆಲವೇ ದಿನಗಳಲ್ಲಿ ಶಿಕ್ಷಕರ ನೇಮಕಾತಿ ಬಗ್ಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಸಚಿವ ಬಿ ಸಿ ನಾಗೇಶ್ ತಮ್ಮ ಟ್ವಿಟರ್ ಪೋಸ್ಟ್ ಮೂಲಕ ತಿಳಿಸಿದ್ದಾರೆ.

Rohit Sharmaಗೆ T20ಗಿಂತಲೂ ODI ನಾಯಕತ್ವದ ಮೇಲೆ ಕಾಣ್ತಿತ್ತು | Oneindia Kannada

Koo App 15 ಸಾವಿರ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರದ ನಿರ್ಧಾರ. ಶೀಘ್ರದಲ್ಲೇ ಅಧಿಸೂಚನೆ. @bsbommai View attached media content - B C Nagesh (@bcnagesh) 11 Dec 2021

source: oneindia.com

Disclaimer

Disclaimer

This story is auto-aggregated by a computer program and has not been created or edited by Dailyhunt Publisher: OneIndia Kannada

#Hashtags