Kannada News Now

1.8M Followers

BIGG NEWS : ಕೊರೊನಾ ಭೀತಿ : ರಾಜ್ಯದಲ್ಲಿ ಶಾಲಾ-ಕಾಲೇಜು ಬಂದ್ ಕುರಿತಂತೆ ಸಚಿವ ನಾಗೇಶ್ ಮಹತ್ವದ ಮಾಹಿತಿ

12 Jan 2022.8:47 PM

ಬೆಂಗಳೂರು : ಕೋವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆ ಭೌತಿಕ ತರಗತಿಗಳನ್ನು ಸ್ಥಗಿತಗೊಳಿಸಿ ಪರ್ಯಾಯ ಬೋಧನಾ ವಿಧಾನದ ತರಗತಿ ನಡೆಸುವ ಕುರಿತು ಶಿಕ್ಷಣ ಇಲಾಖೆ ಅಧಿಕಾರಿಗಳ ಜೊತೆ ಚರ್ಚಿಸಿ ಜಿಲ್ಲಾಧಿಕಾರಿ, ತಹಶೀಲ್ದಾರ್‍ಗಳು ನಿರ್ಧಾರ ತೆಗೆದುಕೊಳ್ಳಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣಲ ಸಚಿವ ಬಿ.ಸಿ ನಾಗೇಶ್ ತಿಳಿಸಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚುತ್ತಿದ್ದರೂ, ಆಸ್ಪತ್ರೆಗೆ ದಾಖಲಾಗುವ ಪ್ರಮಾಣ ಕಡಿಮೆ ಇದೆ. ಒಂದನೇ ಮತ್ತು 2ನೇ ಅಲೆಯಂತೆ ಆತಂಕ ಪಡುವ ಅಗತ್ಯವಿಲ್ಲ ಎಂದರು,

ಕೊರೊನಾ ಪಾಸಿಟಿವಿಟಿ ಪ್ರಮಾಣ ಆಧರಿಸಿ ತಾಲೂಕು, ಸ್ಥಳೀಯ ಮಟ್ಟದಲ್ಲಿ ಶಾಲೆ, ಪಿಯುಸಿ ತರಗತಿಗಳ ಭೌತಿಕ ತರಗತಿಗಳನ್ನು ಸ್ಥಗಿತಗೊಳಿಸಿ ಆನ್‍ಲೈನ್ ಕ್ಲಾಸ್ ನಡೆಸುವ ಕುರಿತು ಶಿಕ್ಷಣ ಇಲಾಖೆ ಅಧಿಕಾರಿಗಳ ಜೊತೆ ಚರ್ಚಿಸಿ ಜಿಲ್ಲಾಧಿಕಾರಿ, ತಹಶೀಲ್ದಾರ್‍ಗಳು ನಿರ್ಧಾರ ತೆಗೆದುಕೊಳ್ಳಬೇಕು, ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಭೌತಿಕ ತರಗತಿಗಳನ್ನು ಸ್ಥಗಿತಗೊಳಿಸುವ ಅಗತ್ಯತೆ ಕಂಡು ಬಂದಿಲ್ಲ. ಈ ಕುರಿತು ತಜ್ಞರ ಜೊತೆ ವಿವರವಾಗಿ ಚರ್ಚಿಸಲಾಗಿದೆ ಎಂದು ಸಚಿವ ಬಿ.ಸಿ ನಾಗೇಶ್ ತಿಳಿಸಿದರು.

ರಾಜ್ಯದಲ್ಲಿ ಮತ್ತೆ ಇಂದು ಕೊರೋನಾ (Coronavirus ) ಮಹಾಸ್ಪೋಟವೇ ಉಂಟಾಗಿದೆ. ಬೆಂಗಳೂರಿನಲ್ಲಿ 15,617 ಸೇರಿದಂತೆ ರಾಜ್ಯಾಧ್ಯಂತ 21,390 ಜನರಿಗೆ ಕೋವಿಡ್ ಪಾಸಿಟಿವ್ ( Corona Positive ) ಎಂಬುದಾಗಿ ದೃಢಪಟ್ಟಿದೆ.ಈ ಕುರಿತಂತೆ ಟ್ವಿಟ್ಟರ್ ನಲ್ಲಿ ( Twitter ) ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ( Minister Dr K Sudhakar ) ಮಾಹಿತಿ ನೀಡಿದ್ದು, ಕಳೆದ 24 ಗಂಟೆಯಲ್ಲಿ 1,95,047 ಜನರನ್ನು ಕೋವಿಡ್ ಪರೀಕ್ಷೆಗೆ ( Covid-19 Test ) ಒಳಪಡಿಸಲಾಗಿದೆ. ಇವರಲ್ಲಿ ಬೆಂಗಳೂರಿನಲ್ಲಿ 15,617 ಸೇರಿದಂತೆ ರಾಜ್ಯದಲ್ಲಿ 21,390 ಜನರಿಗೆ ಕೋವಿಡ್ ದೃಢಪಟ್ಟಿರೋದಾಗಿ ತಿಳಿಸಿದೆ.

ಶಿವಮೊಗ್ಗ: ಇಂದು 'ಸೊರಬ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿ'ನ ಮತ್ತೊಬ್ಬ ವಿದ್ಯಾರ್ಥಿಗೆ ಕೋವಿಡ್ ದೃಢ

GOOD NEWS : ಮಹಿಳೆಯರಿಗೆ 'ಬೊಂಬಾಟ್ ಸುದ್ದಿ' : ಮಾರುಕಟ್ಟೆಗೆ ಬಂತು ಕಣ್ಣೀರು ತರಿಸದ 'ಈರುಳ್ಳಿ'

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags