News18 ಕನ್ನಡ

400k Followers

Government Job: 6406 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ RDPR, ಪಿಯುಸಿ ಪಾಸಾದವರು ಅರ್ಜಿ ಸಲ್ಲಿಸಿ

16 Jan 2022.12:35 PM

RDPR Karnataka Recruitment 2022: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ​ -ಕರ್ನಾಟಕ(Rural Development and Panchayat Raj Department-Karnataka) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಕರ್ನಾಟಕ ಸರ್ಕಾರ(Karnataka Government) ದ ಉದ್ಯೋಗ ಅರಸುತ್ತಿರುವವರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಒಟ್ಟು 6406 ಹುದ್ದೆಗಳು ಖಾಲಿ ಇದ್ದು, ಪಿಯುಸಿ ಪೂರ್ಣಗೊಳಿಸಿರುವವರು ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಆನ್​ಲೈನ್​​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ​ -ಕರ್ನಾಟಕ ಅಧಿಕೃತ ವೆಬ್​ಸೈಟ್​ rdpr.karnataka.gov.in ಗೆ ಭೇಟಿ ನೀಡಬಹುದು.

ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್​ ಇಲಾಖೆ
ಹುದ್ದೆಯ ಹೆಸರು ಗ್ರಾಮ ಪಂಚಾಯತ್ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ, ಸೆಕೆಂಡ್ ಡಿವಿಶನ್ ಅಕೌಂಟ್ಸ್​ ಅಸಿಸ್ಟೆಂಟ್
ಒಟ್ಟು ಹುದ್ದೆಗಳು 6406
ವಿದ್ಯಾರ್ಹತೆ ಪಿಯುಸಿ
ಉದ್ಯೋಗದ ಸ್ಥಳ ಕರ್ನಾಟಕ
ವೇತನ ಮಾಸಿಕ ₹ 21,400-42,000
ಅರ್ಜಿ ಸಲ್ಲಿಕೆ ವಿಧಾನ ಆನ್​​ಲೈನ್​
ಅರ್ಜಿ ಸಲ್ಲಿಕೆ ಆರಂಭ ದಿನಾಂಕ 05/09/2021

ಹುದ್ದೆಯ ಮಾಹಿತಿ:
ಗ್ರಾಮ ಪಂಚಾಯತ್ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ- 3827
ಸೆಕೆಂಡ್ ಡಿವಿಶನ್ ಅಕೌಂಟ್ಸ್​ ಅಸಿಸ್ಟೆಂಟ್ - 2579

ವಿದ್ಯಾರ್ಹತೆ:
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್​ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಗ್ರಾಮ ಪಂಚಾಯತ್ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ, ಸೆಕೆಂಡ್ ಡಿವಿಶನ್ ಅಕೌಂಟ್ಸ್​ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​​ನಿಂದ ಕಡ್ಡಾಯವಾಗಿ ಪಿಯುಸಿ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಕರ್ನಾಟಕ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು RDPR ಕರ್ನಾಟಕ ನೇಮಕಾತಿ ಮಾನದಂಡಗಳ ಪ್ರಕಾರ ಇರಬೇಕು.

ವಯೋಮಿತಿ ಸಡಿಲಿಕೆ:
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕರ್ನಾಟಕ ನಿಯಮಾವಳಿ ಪ್ರಕಾರ ವರ್ಗಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್​ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಗ್ರಾಮ ಪಂಚಾಯತ್ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ, ಸೆಕೆಂಡ್ ಡಿವಿಶನ್ ಅಕೌಂಟ್ಸ್​ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಬೇರೆ ಬೇರೆ ಉದ್ಯೋಗ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ ಮತ್ತು ಸಂದರ್ಶನ
Disclaimer

Disclaimer

This story is auto-aggregated by a computer program and has not been created or edited by Dailyhunt Publisher: News18 Kannada

#Hashtags