Kannada News Now

1.8M Followers

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 'ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆ'ಗಳಿಗೆ ಅರ್ಜಿ ಆಹ್ವಾನ |KSP Recruitment 2021

02 Jan 2022.1:50 PM

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ( Karnataka State Police Department Recruitment ) ಖಾಲಿ ಇರುವಂತ ಸಶಸ್ತ್ರ ಮೀಸಲು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ( Police Sub Inspector Job ) ಭರ್ತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.

7th Pay :ಮಕ್ಕಳ ಶಿಕ್ಷಣ ಭತ್ಯೆ ಪಡೆಯಲು ಸರ್ಕಾರಿ ನೌಕರರಿಗೆ ಅವಕಾಶ : ಏನೇನು ದಾಖಲೆಗಳು ಬೇಕು ?ಮಾಹಿತಿ ಇಲ್ಲಿದೆ

ಈ ಬಗ್ಗೆ ಪೊಲೀಸ್ ಇಲಾಖೆಯಿಂದ ( Police Department ) ಅಧಿಸೂಚನೆ ಹೊರಡಿಸಿದ್ದು ಸಶಸ್ತ್ರ ಮೀಸಲು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ( ಸಿಎಆರ್/ಡಿಎಆರ್) (ಪುರುಷ) ಮತ್ತು ಸೇವೆಯಲ್ಲಿರುವವರು (ಮಿಕ್ಕುಳಿದ ಮತ್ತು ಸ್ಥಳೀಯ ವೃಂದದ) ಖಾಲಿ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಗಳ ವಿವರ

  • ಸಶಸ್ತ್ರ ಮೀಸಲು ಪೊಲೀಸ್ ಸಬ್ ಇನ್ಸ್ ಪೆಕ್ಟರ್ (ಪುರುಷ ) (ಮಿಕ್ಕುಳಿದ ವೃಂದ) - 50 ಹುದ್ದೆ
  • ಸಶಸ್ತ್ರ ಮೀಸಲು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಸೇವೆಯಲ್ಲಿರುವವರಿಗೆ (ಮಿಕ್ಕುಳಿದ ವೃಂದ) - 10
  • ಸಶಸ್ತ್ರ ಮೀಸಲು ಪೊಲೀಸ್ ಸಬ್ ಇನ್ಸ್ ಪೆಕ್ಟರ್ (ಪುರುಷ) (ಸ್ಥಳೀಯ ವೃಂದ) - 09
  • ಸಶಸ್ತ್ರ ಮೀಸಲು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಸೇಲೆಯಲ್ಲಿರುವವರಿಗೆ ( ಸ್ಥಳೀಯ ವೃಂದ ) 01
  • ಸಶಸ್ತ್ರ ಮೀಸಲು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ( ಪರಸ್ಥಳೀಯ ವೃಂದ ) - 01 ಸೇರಿದಂತೆ 71 ಹುದ್ದೆಗಳು

ಅರ್ಜಿ ಶುಲ್ಕ

ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ರೂ.500, ಎಸ್ಸಿ, ಎಸ್ಟಿ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂ.250

ಅರ್ಜಿ ಸಲ್ಲಿಕೆ ವಿಧಾನ

ಅರ್ಹ ಅಭ್ಯರ್ಥಿಗಳು ಆನ್ ಲೈನ್ (Online ) ಮೂಲಕವೇ https://recruitment.ksp.gov.in ನಲ್ಲಿ ಸಲ್ಲಿಸುವುದು. ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ.

ವಯೋಮಿತಿ

ದಿನಾಂಕ 27-01-2022ಕ್ಕೆ ಅಭ್ಯರ್ಥಿಗೆ ಕನಿಷ್ಠ 21 ವರ್ಷ ವಯಸ್ಸಾಗಿರಬೇಕು. ಎಸ್ಸಿ, ಎಸ್ಟಿ, ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 28 ವರ್ಷಗಳು. ಇತರೆ ಅಭ್ಯರ್ಥಿಗಳಿಗೆ 26 ವರ್ಷಗಳು. ಸೇವಾನಿರತ ಅಭ್ಯರ್ಥಿಗಳು ವಯೋಮಿತಿ ಸಡಿಲಿಕೆ ಇದೆ.

ವಿದ್ಯಾರ್ಹತೆ

ಯುಜಿಸಿಯಿಂದ ಮಾನ್ಯತೆ ಪಡೆದಿರುವಂತ ಅಂಗೀಕೃತ ವಿಶ್ವವಿದ್ಯಾಲದಲ್ಲಿ ಪದವಿ ಅಥವಾ ತತ್ಸಮಾನ ಪದವಿಯನ್ನು ಅರ್ಜಿ ಸಲ್ಲಿಸುವ ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ಹೊಂದಿರಬೇಕು.

BIG NEWS : ರಾಜ್ಯದಲ್ಲಿ ಕೋವಿಡ್‌ ಹೆಚ್ಚಳ : ಶಾಲೆಗಳು ಮತ್ತೆ ಬಂದ್‌ ಆಗುತ್ತಾ..?

ವೇತನ ಶ್ರೇಣಿ

ರೂ.37,900 ರಿಂದ ರೂ.70,850 ಜೊತೆಗೆ ಪಿಂಚಣಿ ಸೌಲಭ್ಯ ಅನ್ವಯವಾಗಲಿದೆ.

ನೇಮಕಾತಿ ವಿಧಾನ

ಸಹಿಷ್ಣುತೆ ಪರೀಕ್ಷೆ ಮತ್ತು ದೇಹದಾರ್ಢ್ಯತೆ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಬೆಕು. ಇದಲ್ಲದೇ ಲಿಖಿತ ಪರೀಕ್ಷೆಯಲ್ಲಿ ಗಳಿಸಿದಂತ ಅಂಕಗಳ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಪ್ರಮುಖ ದಿನಾಂಕಗಳು

  • ದಿನಾಂಕ 28-12-2021ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ.
  • ದಿನಾಂಕ 27-01-2022 ಅರ್ಜಿ ಸಲ್ಲಿಸಲು ಕೊನೆಯ ದಿನ
  • ದಿನಾಂಕ 29-01-2022 ಶುಲ್ಕವನ್ನು ಬ್ಯಾಂಕ್ ಅಥವಾ ಅಂಚೆ ಕಚೇರಿಗಳಲ್ಲಿ ಪಾವತಿಸಲು ಕೊನೆಯ ದಿನ

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags