TV9 ಕನ್ನಡ

368k Followers

Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಚಿನ್ನ, ಬೆಳ್ಳಿ ದರದಲ್ಲಿ ಭಾರೀ ಇಳಿಕೆ!

05 Jan 2022.07:17 AM

Gold Silver Price Today: ಇಂದು (ಜನವರಿ 05, ಬುಧವಾರ) ಚಿನ್ನ, ಬೆಳ್ಳಿ ದರ ದೇಶದ ನಗರಗಳಲ್ಲಿ ಇಳಿಕೆಯಾಗಿದ್ದು, ಯಾವ ಯಾವ ನಗರಗಳಲ್ಲಿ ಎಷ್ಟಿದೆ? ಎಂಬ ವಿವರ ಈ ಕೆಳಗಿನಂತಿದೆ.

ಬೆಂಗಳೂರು: ಚಿನ್ನ, ಬೆಳ್ಳಿ ಕೊಳ್ಳುವುದೆಂದರೆ ಎಲ್ಲರಿಗೂ ಆಸಕ್ತಿಯ ವಿಷಯ.

ಅದರಲ್ಲೂ ಮಹಿಳೆಯರಿಗೆ ಹೊಸ ಹೊಸ ಶೈಲಿಯ ಆಭರಣಗಳನ್ನು ಖರೀದಿಸಬೇಕು ಎಂಬ ಬಯಕೆ ಸದಾ ಇರುತ್ತದೆ. ಇದಕ್ಕಾಗಿಯೇ ತಾವು ವೃತ್ತಿ ಜೀವನಕ್ಕೆ ಕಾಲಿಟ್ಟನಂತರ ಒಡವೆ ಮಾಡಿಸಲು ಒಂದಷ್ಟು ಹಣ ಕೂಡಿಡುತ್ತಾರೆ. ಕೇವಲ ಆಭರಣದ ದೃಷ್ಟಿಯಿಂದಲ್ಲದೇ ಹೂಡಿಕೆಯ ರೂಪದಲ್ಲಿಯೂ ಚಿನ್ನ ಉತ್ತಮ ಆಯ್ಕೆ ಎಂದು ತಜ್ಞರು ಹೇಳುತ್ತಾರೆ. ಇದಲ್ಲದೇ ಬಹಳಷ್ಟು ಜನರಿಗೆ ಆಪತ್ಕಾಲದಲ್ಲಿ ಸಕಾಲಕ್ಕೆ ಆಪತ್ಬಾಂಧವನಾಗಿ ಒದಗುವುದು ಕೂಡಿಟ್ಟ ಆಭರಣಗಳು. ಆದರೆ ಆಭರಣಗಳ ಖರೀದಿಗೆ ಸರಿಯಾದ ಸಮಯ ಯಾವುದು ಎಂಬ ಬಗ್ಗೆ ಮಾತ್ರ ಗೊಂದಲ ಇರುತ್ತದೆ. ಹೀಗಾಗಿ ಚಿನ್ನ, ಬೆಳ್ಳಿ ಖರೀದಿಸುವ ಮುನ್ನ ದರ ನಿಗದಿಯ ಬಗ್ಗೆ ಒಮ್ಮೆ ಪರಿಶೀಲಿಸಿ. ಪ್ರತಿನಿತ್ಯ ಚಿನ್ನ (Gold price), ಬೆಳ್ಳಿ ಬೆಲೆ (Silver Price) ಎಷ್ಟಿದೆ? ಎಂಬ ಕುರಿತಾಗಿ ಕುತೂಹಲ ಇರುತ್ತದೆ. ಹೀಗಿರುವಾಗ ಇಂದು (ಜನವರಿ 05, ಬುಧವಾರ) ಚಿನ್ನ, ಬೆಳ್ಳಿ ದರ ದೇಶದ ನಗರಗಳಲ್ಲಿ ಇಳಿಕೆಯಾಗಿದ್ದು, ಯಾವ ಯಾವ ನಗರಗಳಲ್ಲಿ ಎಷ್ಟಿದೆ? ಎಂಬ ವಿವರ ಈ ಕೆಳಗಿನಂತಿದೆ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price)
ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,900 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,49,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 3,500 ರೂಪಾಯಿ ಇಳಿಕೆಯಾಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,990 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,89,900 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 3,700 ರೂಪಾಯಿ ಇಳಿಕೆಯಾಗಿದೆ. ಬೆಳ್ಳಿ ಬೆಲೆ ಕೂಡ ಇಳಿಕೆಯಾಗಿದ್ದು, ಕೆಜಿ ಬೆಳ್ಳಿಗೆ 61,700 ರೂಪಾಯಿ ನಿಗದಿಯಾಗಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price)
ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,170 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,51,700 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 3,300 ರೂಪಾಯಿ ಇಳಿಕೆಯಾಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,230 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,92,300 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 4,100 ರೂಪಾಯಿ ಇಳಿಕೆಯಾಗಿದೆ. ಬೆಳ್ಳಿ ಬೆಲೆ ಇಳಿಕೆಯಾಗಿದ್ದು, ಕೆಜಿ ಬೆಳ್ಳಿಗೆ 65,700 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಚಿನ್ನ, ಬೆಳ್ಳಿ ಬೆಲೆ (Hyderabad Gold Price)
ಹೈದರಾಬಾದ್​ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,900 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,49,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 3,500 ರೂಪಾಯಿ ಇಳಿಕೆಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,990 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,89,900 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 3,700 ರೂಪಾಯಿ ಇಳಿಕೆಯಾಗಿದೆ. ಬೆಳ್ಳಿ ಬೆಲೆ ಇಳಿಕೆಯಾಗಿದ್ದು, ಕೆಜಿ ಬೆಳ್ಳಿಗೆ 65,700 ರೂಪಾಯಿ ನಿಗದಿಯಾಗಿದೆ.

ಮುಂಬೈನಲ್ಲಿ ಚಿನ್ನ, ಬೆಳ್ಳಿ ಬೆಲೆ (Mumbai Gold Price)
ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,260 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,72,600 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,260 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,92,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 100 ರೂಪಾಯಿ ಏರಿಕೆಯಾಗಿದೆ. ಬೆಳ್ಳಿ ಬೆಲೆ ಇಳಿಕೆಯಾಗಿದ್ದು, ಕೆಜಿ ಬೆಳ್ಳಿ ಬೆಲೆ 61,700 ರೂಪಾಯಿ ದಾಖಲಾಗಿದೆ.

ಇದನ್ನೂ ಓದಿ:
Gold Rate: ಆಭರಣ ಪ್ರಿಯರಿಗೆ ಸಂತೋಷದ ವಿಚಾರ; ಚಿನ್ನ, ಬೆಳ್ಳಿ ದರದಲ್ಲಿ ಇಳಿಕೆ!

Gold Rate: ಏರುತ್ತಲೇ ಇದೆ ಚಿನ್ನದ ದರ; ಯಾವ್ಯಾವ ನಗರಗಳಲ್ಲಿ ಎಷ್ಟಿದೆ? ಬೆಲೆ ವಿವರ ಇಲ್ಲಿದೆ

Disclaimer

Disclaimer

This story is auto-aggregated by a computer program and has not been created or edited by Dailyhunt Publisher: TV9 Kannada

#Hashtags