Kannada News Now

1.8M Followers

One Nation One Ration Card : ಪಡಿತರ ಚೀಟಿದಾರರೇ ಗಮನಿಸಿ : `ಒಂದು ರಾಷ್ಟ್ರ ಒಂದು ಪಡಿತರ ಚೀಟಿ' ನೋಂದಣಿ ಹೇಗೆ? ಇಲ್ಲಿದೆ ಮಾಹಿತಿ

20 Jan 2022.06:55 AM

ಬೆಂಗಳೂರು : ಉದ್ಯೋಗ ಮತ್ತು ಇತರ ಜೀವನೋಪಾಯಕ್ಕಾಗಿ ಒಂದು ಸ್ಥಳದಿಂದ ಬೇರೊಂದು ಸ್ಥಳಕ್ಕೆ ವಲಸೆ ಹೋಗುವವರಿಗೆ ಆಹಾರ ಭದ್ರತೆ ನೀಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೂಪಿಸಿರುವ ಒಂದು ರಾಷ್ಟ್ರ ಒಂದು ಪಡಿತರ ಚೀಟಿ ಯೋಜನೆ ಜಾರಿಗೆ ತಂದಿದೆ.

ರಾಷ್ಟ್ರದ ಯಾವುದೇ ರಾಜ್ಯದಲ್ಲಿ ಅಂತ್ಯೋದಯ ಅನ್ನ ಅಥವಾ ಆದ್ಯತಾ ಪಡಿತರ ಚೀಟಿ ಹೊಂದಿರುವವರು ರಾಷ್ಟ್ರದ ಯಾವುದೇ ಭಾಗದ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ರೈತ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್ : ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸಹಾಯಧನ ಸೌಲಭ್ಯಕ್ಕೆ ಅರ್ಜಿ

ಪಡಿತರ ಚೀಟಿದಾರರು ತಮ್ಮ ಪಡಿತರ ಚೀಟಿ ಸಂಖ್ಯೆ/ಆಧಾರ್ ಸಂಖ್ಯೆ ನೀಡಿ ಹೆಬ್ಬೆರಳಿನ ಜೀವಮುದ್ರೆ ನೀಡಿ ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆಯಬಹುದಾಗಿದೆ.

ರಾಷ್ಟ್ರದ ಯಾವುದೇ ರಾಜ್ಯದಲ್ಲಿ ಪಡಿತರ ಚೀಟಿ ಹೊಂದಿದ್ದರೂ ಅಂಥವರು ಯಾವುದೇ ರಾಜ್ಯದಲ್ಲಾದರೂ ಪಡಿತರ ಚೀಟಿ ಸಂಖ್ಯೆ/ಆಧಾರ್ ಸಂಖ್ಯೆ ಹೆಬ್ಬೆರಳಿನ ಮುದ್ರೆ ನೀಡುವ ಮೂಲಕ ಪಡಿತರ ಪಡೆಯಬಹುದು.

Good News : ವಾಹನ ಸವಾರರಿಗೆ ಗುಡ್ ನ್ಯೂಸ್: ಇನ್ಮುಂದೆ 'ಆನ್ ಲೈನ್' ಮೂಲಕ DL, LL ನವೀಕರಣಕ್ಕೆ ಅವಕಾಶ

ಪಡಿತರ ಚೀಟಿದಾರರ ನೋಂದಣಿ ಹೇಗೆ?

ಒಂದು ರಾಷ್ಟ್ರಒಂದು ಪಡಿತರ ಚೀಟಿ ಯೋಜನೆಯ ಲಾಭ ಪಡೆಯಲು ಬಯಸುವ ಪಡಿತರ ಚೀಟಿದಾರರು ಭಾರತ ಸರ್ಕಾರದ ಮೇರಾ ರೇಷನ್ ಆಯಪ್ ಅಥವಾ ಸಹಾಯವಾಣಿ ಸಂಖ್ಯೆ 14445 ಕ್ಕೆ ಕರೆಮಾಡಿ ಒಂದು ನಿರ್ದಿಷ್ಟ ರಾಜ್ಯ/ಜಿಲ್ಲೆ/ ಸ್ಥಳದಲ್ಲಿ ಪಡಿತರ ಪಡೆಯುವ ಬಗ್ಗೆ ನೋಂದಾಯಿಸಿಕೊಳ್ಳಬಹುದು.


Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags