ಕನ್ನಡ ಪ್ರಭ

1.2M Followers

ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಸಮುದಾಯಕ್ಕೆ ಬಡ್ತಿಯಲ್ಲಿ ಮೀಸಲಾತಿ: ಮಾನದಂಡ ಹಾಕಲು ಸುಪ್ರೀಂ ಕೋರ್ಟ್ ನಕಾರ

28 Jan 2022.1:24 PM

ನವದೆಹಲಿ: ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ (SC&ST) ಬಡ್ತಿಯಲ್ಲಿ ಮೀಸಲಾತಿ ನೀಡಲು ಮಾನದಂಡ ಅಥವಾ ಅಳತೆಗೋಲು (Yardstick) ಹಾಕಲು ಸುಪ್ರೀಂ ಕೋರ್ಟ್ (Supreme Court) ಶುಕ್ರವಾರ ನಿರಾಕರಿಸಿದ್ದು, ಅದನ್ನು ರಾಜ್ಯ ಸರ್ಕಾರಗಳ ವಿವೇಚನೆಗೆ ಬಿಟ್ಟಿದೆ.

ನ್ಯಾಯಮೂರ್ತಿ ನಾಗೇಶ್ವರ ರಾವ್ ನೇತೃತ್ವದ ಮೂವರು ನ್ಯಾಯಾಧೀಶರನ್ನೊಳಗೊಂಡ ನ್ಯಾಯಪೀಠ, ಎಸ್‌ಸಿ/ಎಸ್‌ಟಿಗಳ ಪ್ರಾತಿನಿಧ್ಯದ ಅಸಮರ್ಪಕತೆಯ ಕುರಿತು ದತ್ತಾಂಶ ಸಂಗ್ರಹಿಸಲು ರಾಜ್ಯಗಳು ಬದ್ಧವಾಗಿವೆ. ಎಸ್‌ಸಿ/ಎಸ್‌ಟಿಗಳ ಪ್ರಾತಿನಿಧ್ಯದ ಅಸಮರ್ಪಕತೆಯನ್ನು ನಿರ್ಧರಿಸಲು, ರಾಜ್ಯಗಳಿಗೆ ಹಾಗೆ ಮಾಡಲು ಅದು ಯಾವುದೇ ಮಾನದಂಡ ಹಾಕಲು ಸಾಧ್ಯವಿಲ್ಲ ಎಂದು ಕೂಡ ಸುಪ್ರೀಂ ಕೋರ್ಟ್ ಹೇಳಿದೆ.

ಈ ಹಿಂದೆ ಸುಪ್ರೀಂ ಕೋರ್ಟ್ ಈ ಕುರಿತ ತೀರ್ಪನ್ನು ಅಕ್ಟೋಬರ್ 26, 2021ಕ್ಕೆ ಕಾಯ್ದಿರಿಸಿತ್ತು. ನ್ಯಾಯಮೂರ್ತಿ ನಾಗೇಶ್ವರ ರಾವ್ ನೇತೃತ್ವದ ತ್ರಿಸದಸ್ಯ ಪೀಠವು ಅಟಾರ್ನಿ ಜನರಲ್ ಕೆ ಕೆ ವೇಣುಗೋಪಾಲ್, ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್‌ಜಿ) ಬಲ್ಬೀರ್ ಸಿಂಗ್ ಮತ್ತು ವಿವಿಧ ರಾಜ್ಯಗಳ ಪರವಾಗಿ ಹಾಜರಾಗುವ ಇತರ ಹಿರಿಯ ವಕೀಲರು ಸೇರಿದಂತೆ ಎಲ್ಲಾ ಕಕ್ಷಿದಾರರನ್ನು ಪ್ರಕರಣದಲ್ಲಿ ಪರ-ವಿರೋಧ ಚರ್ಚೆಗಳನ್ನು ಆಲಿಸಿತು.

ಸ್ವಾತಂತ್ರ್ಯ ಬಂದು ಸುಮಾರು 75 ವರ್ಷಗಳ ನಂತರವೂ ಎಸ್‌ಸಿ ಮತ್ತು ಎಸ್‌ಟಿಗಳಿಗೆ ಸೇರಿದವರನ್ನು ಹಿಂದುಳಿದ ವರ್ಗಗಳ ಅರ್ಹತೆಯ ಮಟ್ಟಕ್ಕೆ ತರಲಾಗಿಲ್ಲ ಎಂಬುದು ಸತ್ಯ ಎಂದು ಕೇಂದ್ರ ಸರ್ಕಾರವು ಈ ಹಿಂದೆ ಪೀಠಕ್ಕೆ ತಿಳಿಸಿತ್ತು.

ಎಸ್‌ಸಿ ಮತ್ತು ಎಸ್‌ಟಿಗಳಿಗೆ ಸೇರಿದವರು ಎ ಗುಂಪಿನ ಉದ್ಯೋಗಗಳಲ್ಲಿ ಉನ್ನತ ಹುದ್ದೆಯನ್ನು ಪಡೆಯುವುದು ಕಷ್ಟಕರವಾಗಿದೆ. ಇಂತಹ ಸಮಯದಲ್ಲಿ ಎಸ್‌ಸಿ, ಎಸ್‌ಟಿಗಳು ಮತ್ತು ಇತರ ಹಿಂದುಳಿದ ವರ್ಗಗಳಿಗೆ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ನಿರ್ದಿಷ್ಟ ಆಧಾರವನ್ನು ನೀಡುವ ಸಮಯ ಬಂದಿದೆ ಎಂದು ಅಟಾರ್ನಿ ಜನರಲ್ ಕೆ ಕೆ ವೇಣುಗೋಪಾಲ್ ನ್ಯಾಯಾಲಯ ಮುಂದೆ ವಾದಿಸಿದರು.

ಪರಿಶಿಷ್ಟ ಜಾತಿ (ಎಸ್‌ಸಿಗಳು) ಮತ್ತು ಪರಿಶಿಷ್ಟ ಪಂಗಡಗಳಿಗೆ (ಎಸ್‌ಟಿಗಳು) ಬಡ್ತಿಯಲ್ಲಿ ಮೀಸಲಾತಿ ನೀಡುವ ವಿಷಯದ ಕುರಿತು ಅದು ತನ್ನ ನಿರ್ಧಾರವನ್ನು ಮತ್ತೆ ತಿಳಿಸುವುದಿಲ್ಲ. ಅದನ್ನು ಹೇಗೆ ಜಾರಿಗೆ ತರಬೇಕು ಎಂಬುದನ್ನು ರಾಜ್ಯಗಳು ನಿರ್ಧರಿಸಬೇಕು ಎಂದು ಸುಪ್ರೀಂ ಕೋರ್ಟ್ ನ ನ್ಯಾಯಪೀಠ ಈ ಹಿಂದೆ ಹೇಳಿತ್ತು.

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada Prabha

#Hashtags