ನ್ಯೂಸ್ ಕರ್ನಾಟಕ ಕನ್ನಡ

241k Followers

ಎಸ್ ಎಸ್ ಎಲ್ ಸಿ, ಪಿಯುಸಿ ವಾರ್ಷಿಕ ಪರೀಕ್ಷೆ: 'ಕಡ್ಡಾಯ ಹಾಜರಾತಿ ನಿಯಮ'ದಿಂದ ವಿನಾಯಿತಿ

01 Mar 2022.4:28 PM

ಬೆಂಗಳೂರು: ರಾಜ್ಯದಲ್ಲಿ ಕೊರೋನಾ 3ನೇ ಅಲೆಯ ಕಾರಣದಿಂದಾಗಿ ಶಾಲಾ-ಕಾಲೇಜುಗಳ ಭೌತಿಕ ತರಗತಿಗಳು ನಡೆದಿಲ್ಲ. ಈ ನಡುವೆಯೂ ಮಾರ್ಚ್, ಏಪ್ರಿಲ್ ನಲ್ಲಿ ಎಸ್ ಎಸ್ ಎಲ್ ಸಿ, ಪಿಯುಸಿ ವಾರ್ಷಿಕ ಪರೀಕ್ಷೆ ನಡೆಸೋದಕ್ಕೆ ದಿನಾಂಕವನ್ನು ಪ್ರಕಟಿಸಿದೆ.

ಕೊರೋನಾ ಕಾರಣದಿಂದ ಕಳೆದೆರಡು ವರ್ಷ ಸರಿಯಾಗಿ ಶಾಲೆಗಳು ನಡೆದೇ ಇಲ್ಲ ಪರೀಕ್ಷೆಗೆ ವಿದ್ಯಾರ್ಥಿಗಳಿಗೆ ಕಡ್ಡಾಯ ಹಾಜರಾತಿ ನಿಯಮವನ್ನು ಸಡಿಲಗೊಳಿಸೋದಕ್ಕೆ ಶಿಕ್ಷಣ ಇಲಾಖೆ ಮುಂದಾಗಿದೆ.

ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿರುವಂತ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು, ಈ ಶೈಕ್ಷಣಿಕ ವರ್ಷದಲ್ಲಿ ಬೋರ್ಡ್ ಪರೀಕ್ಷೆಗೆ ಹಾಜರಾಗುತ್ತಿರುವಂತ ವಿದ್ಯಾರ್ಥಿಗಳಿಗೆ ಶೇ.75ರ ಹಾಜರಾತಿ ಕಡ್ಡಾಯವಲ್ಲ. ಈಗಾಗಲೇ ಈ ವಿಚಾರವನ್ನು ಶಿಕ್ಷಣ ಇಲಾಖೆಯ ಅಧಿಕಾರಿಗಳಉ, ಶಾಲಾ-ಕಾಲೇಜುಗಳಿಗೆ ಮಾಹಿತಿ ನೀಡಿದ್ದಾರೆ ಎಂದಿದ್ದಾರೆ.

ಅಂದಹಾಗೇ ಪ್ರತಿ ವರ್ಷ ಕಡ್ಡಾಯ ಹಾಜರಾತಿ ನಿಯಮದ ಕಾರಣದಿಂದಾಗಿ ಬೋರ್ಡ್ ಪರೀಕ್ಷೆಗೆ ಅನೇಕ ವಿದ್ಯಾರ್ಥಿಗಳು ಹೊರಗುಳಿಯುತ್ತಿದ್ದಾರೆ. ಶೇ.75ರ ಕಡ್ಡಾಯ ಹಾಜರಾತಿ ನಿಯಮದಿಂದ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗೆ ತಪ್ಪಿಸುವಂತೆಯೂ ಆಗಿದೆ. ಇದೀಗ ಶಿಕ್ಷಣ ಇಲಾಖೆ ಈ ವರ್ಷ ಈ ಕಡ್ಡಾಯ ಹಾಜರಾತಿಯಿಂದ ವಿನಾಯ್ತಿ ನೀಡಿದ ಕಾರಣ, 10, 12ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ದೊರೆತಿದೆ.

Disclaimer

Disclaimer

This story is auto-aggregated by a computer program and has not been created or edited by Dailyhunt Publisher: News Kannada