Kannada News Now

1.8M Followers

BIGG BREAKING NEWS: 'ದ್ವೀತಿಯ ಪಿಯು ವಾರ್ಷಿಕ ಪರೀಕ್ಷೆ'ಯ 'ಪರಿಷ್ಕೃತ ತಾತ್ಕಾಲಿಕ ವೇಳಾಪಟ್ಟಿ' ಪ್ರಕಟ: ಹೀಗಿದೆ ವಿಷಯವಾರು ವೇಳಾಪಟ್ಟಿ | Second PU Exam

02 Mar 2022.7:59 PM

ವರದಿ: ವಸಂತ ಬಿ ಈಶ್ವರಗೆರೆ

ಬೆಂಗಳೂರು: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯು ನಡೆಸುವಂತ ಜೆಇಇ ಪರೀಕ್ಷೆಯ ( JEE Main Exam ) ಮೊದಲ ಸೆಷನ್ ದಿನಾಂಕ 16-04-2022 ರಿಂದ 22-04-2022ರವರೆಗೆ ನಡೆಸಲು ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ವೇಳಾಪಟ್ಟಿಯ ದಿನಾಂಕವೇ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ( Second PUC Main Exam ) ವೇಳಾಪಟ್ಟಿಯಂದೇ ನಿಗದಿಯಾಗಿತ್ತು. ಇದರಿಂದ ಅನೇಕ ವಿದ್ಯಾರ್ಥಿಗಳಿಗೆ ಜೆಇಇ ಪರೀಕ್ಷೆ ಬರೆಯೋದಕ್ಕೆ ವಂಚಿತರಾಗುತ್ತಿದ್ದರು.

ಈ ಹಿನ್ನಲೆಯಲ್ಲಿ, ಇದೀಗ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಪರಿಷ್ಕರಿಸಲಾಗಿದೆ.

ಈ ಕುರಿತಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯು ( Karnataka PU Board ) ನೂತನ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗಳು ದಿನಾಂಕ 22-04-2022ರಿಂದ ಆರಂಭಗೊಂಡು, ದಿನಾಂಕ 11-05-2022ರವರೆಗೆ ನಡೆಯಲಿದೆ ಎಂಬುದಾಗಿ ತಿಳಿಸಿದೆ.

ಹೀಗಿದೆ ಪರಿಷ್ಕೃತ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ( Karnataka Second PU Main Exam Time Table )

ಈ ಮೇಲ್ಕಂಡ ಪರೀಕ್ಷಾ ವೇಳಾಪಟ್ಟಿಯ ಬಗ್ಗೆ ವಿದ್ಯಾರ್ಥಿಗಳು, ಪೋಷಕರು ದಿನಾಂಕ 05-03-2022ರ ಒಳಗಾಗಿ jdexam.dpue@gmail.com ಗೆ ಮೇಲ್ ಮಾಡಿ ಆಕ್ಷೇಪಣೆ ಸಲ್ಲಿಸುವಂತೆ ಕಾಲಾವಕಾಶ ನೀಡಲಾಗಿದೆ.

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags