ಪ್ರಜಾವಾಣಿ

1.5M Followers

7ನೇ ವೇತನ ಆಯೋಗ ರಚನೆ: ಬಜೆಟ್ ಅಧಿವೇಶನಕ್ಕೂ ಮೊದಲು ಅಧಿಕಾರಿಗಳ ಜೊತೆ ಚರ್ಚೆ, ಸಿಎಂ

17 Feb 2022.1:07 PM

ಬೆಂಗಳೂರು: 'ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ 7 ನೇ ವೇತನ ಆಯೋಗ ರಚಿಸುವ ಕುರಿತು ಬಜೆಟ್ ಅಧಿವೇಶನಕ್ಕೂ ಮೊದಲು ಅಧಿಕಾರಿಗಳ ಜೊತೆ ಚರ್ಚಿಸಿ ತೀರ್ಮಾನಿಸಲಾಗುವುದು' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ತಿಳಿಸಿದರು.

ವಿಧಾನ ಪರಿಷತ್ ನಲ್ಲಿ ಜೆಡಿಎಸ್ ನ ತಿಪ್ಪೇಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ, 'ಸರ್ಕಾರಿ ನೌಕರರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರ ವೇತನದಲ್ಲಿ ತಾರತಮ್ಯ ಇದೆ' ಎಂದರು.

ತಿಪ್ಪೇಸ್ವಾಮಿ ಮಾತನಾಡಿ, '25 ರಾಜ್ಯಗಳಲ್ಲಿ ಅಲ್ಲಿನ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರಿ ನೌಕರರ ವೇತನ‌ ನೀಡಲಾಗುತ್ತಿದೆ. ಅದೇ ರೀತಿ ರಾಜ್ಯದಲ್ಲೂ ವೇತನ ನೀಡಬೇಕು' ಎಂದು ಆಗ್ರಹಿಸಿದರು.

'ಕೂಡಲೇ 7 ನೇ ವೇತನ ಆಯೋಗ ಜಾರಿ ಮಾಡಬೇಕು. 6 ನೇ ವೇತನ ಆಯೋಗ ವೇತನದಲ್ಲಿ ಇರುವ ವೇತನ ತಾರತಮ್ಯ ಸರಿ ಮಾಡಿಬೇಕು' ಎಂದೂ ಒತ್ತಾಯಿಸಿದರು.

'ರಾಜ್ಯ ಮತ್ತು ಕೇಂದ್ರ ನೌಕರರ ನಡುವೆ ವೇತನ ತಾರತಮ್ಯ ಇದೆ. 2017-18 ರಲ್ಲಿ ವೇತನ ಪರಿಷ್ಕರಣೆ ಆಗಿತ್ತು. ಆರ್ಥಿಕ ಪರಿಸ್ಥಿತಿ ನೋಡಿಕೊಂಡು ಈ ಬಗ್ಗೆ ಕ್ರಮ ತೆಗೆದುಕೊಳ್ಳಲಾಗುವುದು'' ಎಂದು ಮುಖ್ಯಮಂತ್ರಿ ಹೇಳಿದರು.

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Prajavani

#Hashtags