Kannada News Now

1.8M Followers

NPS : ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಬೊಮ್ಮಾಯಿ ಗುಡ್ ನ್ಯೂಸ್ : ಹಳೆ ಪಿಂಚಣಿ ಯೋಜನೆ ಜಾರಿಗೆ ತಾತ್ವಿಕ ಒಪ್ಪಿಗೆ

26 Feb 2022.05:50 AM

ಬೆಂಗಳೂರು : ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಜಾರಿಗೊಳಿಸಿರುವ ಹೊಸ ಪಿಂಚಣಿ ಯೋಜನೆಯನ್ನು (New Pension Scheme - NPS) ಹಿಂಪಡೆದು, ಹಳೆಯ ನಿಯಮದಂತೆ ಪಿಂಚಣಿ ಸೌಲಭ್ಯ ಕಲ್ಪಿಸಬೇಕು ಎಂಬ ರಾಜ್ಯ ಸರ್ಕಾರಿ ನೌಕರರ ಸಂಘದ ಮನವಿಗೆ ಸಿಎಂ ಬಸವರಾಜ ಬೊಮ್ಮಾಯಿ ತಾತ್ವಿಕ ಒಪ್ಪಿಗೆ ನೀಡಿದ್ದಾರೆ.

BIGG NEWS : ರಾಜ್ಯ ಸರ್ಕಾರದಿಂದ 'ಕಡಲೆಕಾಳು ಬೆಳೆಗಾರ'ರಿಗೆ ಸಿಹಿಸುದ್ದಿ : 'ಬೆಂಬಲ ಬೆಲೆ ಯೋಜನೆ'ಯಡಿ 'ಕಡಲೆಕಾಳು ಖರೀದಿ'ಗೆ ಅನುಮತಿ

ಈ ಕುರಿತು ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಮಾಹಿತಿ ನೀಡಿದ್ದು, ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಜಾರಿಗೊಳಿಸಿರುವ ಹೊಸ ಪಿಂಚಣಿ ಯೋಜನೆಯನ್ನು ಹಿಂಪಡೆದು, ಹಳೆಯ ನಿಯಮದಂತೆ ಪಿಂಚಣಿ ಸೌಲಭ್ಯ ಕಲ್ಪಿಸಬೇಕು ಎಂಬ ರಾಜ್ಯ ಸರ್ಕಾರಿ ನೌಕರರ ಸಂಘದ ಮನವಿಗೆ ಸಿಎಂ ಬೊಮ್ಮಾಯಿ ಒಪ್ಪಿಗೆ ನೀಡಿದ್ದಾರೆ ಎಂದು ಹೇಳಿದ್ದಾರೆ.

Good News : 'ಗೋಮಾಳ ಜಮೀನು' ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : ನಮೂನೆ-50, 53ರ ಅರ್ಜಿ ಪರಿಗಣಿಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್

ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪತ್ರ ಬರೆದಿದ್ದಾರೆ. ಹಳೆ ಪಿಂಚಣಿ ಯೋಜನೆಯನ್ನೇ ಜಾರಿಗೊಳಿಸಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ರಾಜಸ್ಥಾನ ಸರ್ಕಾರವು ಹೊಸ ಮಾದರಿಯ ಪಿಂಚಣಿ ಯೋಜನೆ ರದ್ದುಗೊಳಿಸಿದೆ. ಮಾರ್ಚ್ 4ರಂದು ಮಂಡಿಸುವ 2022-23ನೇ ಸಾಲಿನ ಕರ್ನಾಟಕ ರಾಜ್ಯದ ಆಯವ್ಯಯದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಹೊಸ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವ ಮಹತ್ವದ ನಿರ್ಧಾರವನ್ನು ಪ್ರಕಟಿಸಬೇಕು ಎಂದು ಕೋರಿದ್ದಾರೆ. ಏಪ್ರಿಲ್ 1, 2006ರ ನಂತರದ ನೌಕರರಿಗೆ ಹೊಸ ಪಿಂಚಣಿ ಯೋಜನೆ ಜಾರಿಗೊಳಿಸಲಾಗಿದೆ. ಇದರಿಂದ ಲಕ್ಷಾಂತರ ನೌಕರರಿಗೆ ನಿವೃತ್ತಿ ನಂತರ ಅಗತ್ಯ ಸೌಲಭ್ಯಗಳು ಸಿಗುವುದಿಲ್ಲ. ಆರ್ಥಿಕ ಸೌಲಭ್ಯ ದೊರೆಯದೆ ಜೀವನ ಕಷ್ಟಸಾಧ್ಯವಾಗಿದೆ ಆದ್ದರಿಂದ ಹಳೆ ಪಿಂಚಣಿ ಯೋಜನೆಯನ್ನೇ ಜಾರಿಗೊಳಿಸಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags