Kannada News Now

1.8M Followers

BIGG NEWS : ರಾಜ್ಯದಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದಲೇ `ಪರಿಷ್ಕೃತ ಪಠ್ಯ ಪುಸ್ತಕ' : ರಾಜ್ಯ ಸರ್ಕಾರದಿಂದ ಆದೇಶ

26 Mar 2022.05:47 AM

ಬೆಂಗಳೂರು : ರಾಜ್ಯದಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದಲೇ ಪರಿಷ್ಕೃತ ಪಠ್ಯ ಪುಸ್ತಕ ವಿತರಣೆ ಮಾಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಪಠ್ಯಪುಸ್ತಕ ಪರಿಶೀಲನಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ವರದಿಯನ್ವಯ 2022-23 ನೇ ಸಾಲಿಗೆ ಪಠ್ಯಪುಸ್ತಕಗಳನ್ನು ಮುದ್ರಿಸಿ ವಿತರಣೆ ಮಾಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸಮಿತಿಯು 1 ರಿಂದ 10 ನೇ ತರಗತಿವರೆಗಿನ ಭಾಷಾ ವಿಷಯಗಳು, 2 ಮತ್ತು 4 ನೇ ತರಗತಿಗಳ ಪರಿಸರ ಅಧ್ಯಯನ ಹಾಗೂ 6 ರಿಂದ 10 ನೇ ತರಗತಿವರೆಗಿನ ಸಮಾಜ ವಿಜ್ಞಾನ ವಿಷಯದ ಪಠ್ಯ ಪುಸ್ತಕಗಳನ್ನು ಪರಿಷ್ಕರಿಸಿದೆ.

ಇನ್ನು 6 ರಿಂದ 8 ನೇ ತರಗತಿವರೆಗಿನ ಸಮಾಜ ವಿಜ್ಞಾನದ 7 ಮಾಧ್ಯಮದ 68 ಪರಿಷ್ಕೃತ ಪಠ್ಯ ಪುಸ್ತಕಗಳು ಹಾಗೂ 1 ರಿಂದ 10 ನೇ ತರಗತಿವರೆಗಿನ ಕನ್ನಡ ಭಾಷಾ ವಿಷಯದ 15 ಪರಿಷ್ಕೃತ ಪುಸ್ತಕಗಳನ್ನು ಮುದ್ರಿಸಿ ವಿತರಿಸಲಾಗುತ್ತಿದೆ.

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags