ವಿಜಯವಾಣಿ

505k Followers

ಶಾಲೆಯಲ್ಲಿ ಹಿಜಾಬ್​ ಬ್ಯಾನ್​: ​ಸಮವಸ್ತ್ರ ಎತ್ತಿಹಿಡಿದು ಐತಿಹಾಸಿಕ ತೀರ್ಪು ಪ್ರಕಟಿಸಿದ ಹೈಕೋರ್ಟ್​

15 Mar 2022.10:42 AM

ಬೆಂಗಳೂರು: ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್​ ನಿರ್ಬಂಧ ಪ್ರಕರಣ ಸಂಬಂಧ ಹೈಕೋರ್ಟ್​ ಮಹತ್ವದ ತೀರ್ಪು ನೀಡಿದೆ. ಹಿಜಾಬ್ ಧರಿಸುವುದು ಇಸ್ಲಾಂ ಅಗತ್ಯ ಧಾರ್ಮಿಕ ಆಚರಣೆಯಲ್ಲ. ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿರ್ಬಂಧ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಎಲ್ಲ ಅರ್ಜಿಗಳನ್ನೂ ವಜಾ ಮಾಡಲಾಗಿದೆ.

ಶಾಲಾ-ಕಾಲೇಜುಗಲ್ಲಿ ವಿದ್ಯಾರ್ಥಿಗಳು ಸಮವಸ್ತ್ರ ಧರಿಸಬೇಕು. ಸರ್ಕಾರದ ವಸ್ತ್ರ ಸಂಹಿತೆ ನೀತಿಯನ್ನು ಪ್ರಶ್ನಿಸುವಂತಿಲ್ಲ ಎಂದು ಹೈಕೋರ್ಟ್ ಪೂರ್ಣ ಪೀಠ ಮಹತ್ವದ ತೀರ್ಪು ಪ್ರಕಟಿಸಿದೆ.

ಶಾಲಾ-ಕಾಲೇಜುಗಳ ವಸ್ತ್ರ ಸಂಹಿತೆಯನ್ನು ವಿದ್ಯಾರ್ಥಿಗಳು ಪ್ರಶ್ನಿಸುವಂತಿಲ್ಲ. ಸರ್ಕಾರದ ಸಮವಸ್ತ್ರ ಸಂಹಿತೆ ಕಾನೂನು ಬದ್ಧವಾಗಿದೆ ಎಂದು ಹೈಕೋರ್ಟ್​ ಹೇಳಿದೆ. ನ್ಯಾಯಪೀಠವು 8 ನಿಮಿಷದಲ್ಲಿ ತೀರ್ಪು ಓದಿ‌ ಮುಗಿಸಿತು.

ಕಾಲೇಜುಗಳಲ್ಲಿ ಹಿಜಾಬ್​ ನಿರ್ಬಂಧಿಸಿರುವ ಕ್ರಮ ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ವಸ್ತ್ರಸಂಹಿತೆ ಜಾರಿ ಸಂಬಂಧ ಕಳೆದ ಫೆ.5ರಂದು ಸರ್ಕಾರ ಹೊರಡಿಸಿದ್ದ ಆದೇಶ ಪ್ರಶ್ನಿಸಿ 10ಕ್ಕೂ ಅಧಿಕ ಅರ್ಜಿಗಳು ಹಾಗೂ ಮಧ್ಯಂತರ ಅರ್ಜಿಗಳು ಸಲ್ಲಿಕೆಯಾಗಿದ್ದವು. ಸತತ 11 ದಿನ ವಾದ-ಪ್ರತಿವಾದ ಆಲಿಸಿದ್ದ ಮುಖ್ಯ ನ್ಯಾಯಮೂರ್ತಿ ರಿತುರಾಜ್​ ಅವಸ್ಥಿ ಹಾಗೂ ನ್ಯಾಯಮೂರ್ತಿಗಳಾದ ಕೃಷ್ಣ ಎಸ್​. ದೀಕ್ಷಿತ್​ ಮತ್ತು ಖಾಜಿ ಜೈಬುನ್ನಿಸಾ ಮೊಹಿದ್ದೀನ್​ ಅವರಿದ್ದ ಪೂರ್ಣಪೀಠ ಫೆ.25ರಂದು ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿತ್ತು. ಇಂದು ತೀರ್ಪು ಪ್ರಕಟಿಸುವ ಮೂಲಕ ಹಿಜಾಬ್​ ವಿವಾದಕ್ಕೆ ತಾರ್ಕಿಕ ಅಂತ್ಯ ಹಾಡಿದೆ.

ವಿಚ್ಛೇದನ ಕೇಳಿದ್ದ ಅಪ್ಪ-ಅಮ್ಮನನ್ನು ಜಡ್ಜ್​ ಎದುರೇ ಒಂದುಗೂಡಿಸಿದ ಮಗ! ಶಿವಮೊಗ್ಗದಲ್ಲಿ ಮನಮಿಡಿಯುವ ಘಟನೆ

ಹಿಂದೂ ಯುವತಿ ಬಾಳಲ್ಲಿ ಘೋರ ದುರಂತ: ಗಂಡನ ರಹಸ್ಯ ಬಯಲಾದ ಬೆನ್ನಲ್ಲೇ ಮತ್ತೊಂದು ನರಕ ದರ್ಶನ

ಕಾಲೇಜಿಗೆ ಹೋಗುವಾಗ ಬೈಕ್ ಮೇಲೆ ಹರಿದ ಕ್ಯಾಂಟರ್: ಅಪ್ಪನ ಕಣ್ಣೆದುರೇ ವಿಲವಿಲ ಒದ್ದಾಡಿ ಪ್ರಾಣಬಿಟ್ಟ ಮಗ

ನನ್ನದು ತೆರೆದ ಪುಸ್ತಕ, ಕದ್ದುಮುಚ್ಚಿ ಯಾವ್ದೂ ಇಲ್ಲ.. ಈಗಲೂ ಅಲ್ಲಿಗೆ ಹೋಗ್ತೀನಿ.. ಯೋಗೇಶ್ವರ್​ಗೆ ಎಚ್​ಡಿಕೆ ತಿರುಗೇಟು

ಬೆಂಗ್ಳೂರಲ್ಲಿ ರಸ್ತೆ ಗುಂಡಿಗೆ ಯುವಕ ಬಲಿ: ಇದ್ದೊಬ್ಬ ಮಗನನ್ನು ಕಳೆದುಕೊಂಡ ಅಮ್ಮನ ಗೋಳಾಟ ನೋಡಲಾಗ್ತಿಲ್ಲ…

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Vijayvani

#Hashtags