ಕನ್ನಡದುನಿಯಾ

1.6M Followers

ಮಾ. 28 ರಿಂದ SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಮುಂಚಿತವಾಗಿ ಸಿಗಲಿದೆ ಪರೀಕ್ಷಾ ಕೊಠಡಿ ಮಾಹಿತಿ

18 Mar 2022.07:02 AM

ಬೆಂಗಳೂರು: ಮಾರ್ಚ್ 28 ರಿಂದ ಏಪ್ರಿಲ್ 11 ರವರೆಗೆ ಎಸ್‌ಎಸ್‌ಎಲ್ಸಿ ಪರೀಕ್ಷೆ ನಡೆಯಲಿದೆ. ಎಸ್‌ಎಸ್‌ಎಲ್ಸಿ ಪರೀಕ್ಷೆ ಸಂದರ್ಭದಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿರುವ ಕೊಠಡಿ ಸಂಖ್ಯೆ, ಆಸನಗಳ ಕುರಿತಾಗಿ ಮುಂಚಿತವಾಗಿ ಎಸ್‌ಎಂಎಸ್ ಮೂಲಕ ಮಾಹಿತಿ ನೀಡಲು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ತೀರ್ಮಾನಿಸಿದೆ.

ಪರೀಕ್ಷಾ ಕೇಂದ್ರಗಳ ಬಳಿ ವಿದ್ಯಾರ್ಥಿಗಳು, ಪೋಷಕರು ಗುಂಪುಗೂಡುವುದನ್ನು ತಡೆಯಲು ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಸಲುವಾಗಿ ಮೊದಲೇ ವಿದ್ಯಾರ್ಥಿಗಳ ಪೋಷಕರ ಮೊಬೈಲ್ ಗಳಿಗೆ ವಿದ್ಯಾರ್ಥಿಗಳ ಪರೀಕ್ಷಾ ಕೇಂದ್ರ, ಕೊಠಡಿ, ಆಸನ ಸಂಖ್ಯೆ ಬಗ್ಗೆ ಮಾಹಿತಿಯನ್ನು ಎಸ್‌ಎಂಎಸ್ ಮೂಲಕ ಕಳುಹಿಸಲಾಗುತ್ತದೆ.

ಕೊರೋನಾ ಸೋಂಕಿನಿಂದ ಮನೆಯಲ್ಲಿ ಐಸೋಲೇಷನ್ ನಲ್ಲಿರುವ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಇಚ್ಚಿಸಿದಲ್ಲಿ ವೈದ್ಯಾಧಿಕಾರಿಗಳ ಪ್ರಮಾಣ ಪತ್ರ ಪಡೆಯಬೇಕು. ಸೋಂಕಿತ ವಿದ್ಯಾರ್ಥಿಗಳನ್ನು ವೈದ್ಯಕೀಯ ತಂಡದೊಂದಿಗೆ ಆಂಬುಲೆನ್ಸ್ ನಲ್ಲಿ ಕರೆದುಕೊಂಡು ಬಂದು ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಪರೀಕ್ಷೆ ಬರೆಸಬೇಕು ಎಂದು ಹೇಳಲಾಗಿದೆ.

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada Dunia

#Hashtags