Kannada News Now

1.8M Followers

BIG NEWS: 2022-23ನೇ ಸಾಲಿನ 'ಶೈಕ್ಷಣಿಕ ವೇಳಾಪಟ್ಟಿ' ಬಿಡುಗಡೆ: ಮೇ.16ರಿಂದ ಶಾಲೆ ಪ್ರಾರಂಭ, ಅಕ್ಟೋಬರ್.3ರಿಂದ 16 ದಸರಾ ರಜೆ

21 Apr 2022.10:51 AM

ವರದಿ : ವಸಂತ ಬಿ ಈಶ್ವರಗೆರೆ

ಬೆಂಗಳೂರು: 2022-23ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ವಾರ್ಷಿಕ ಕಾರ್ಯಸೂಚಿಯನ್ನು ಬಿಡುಗಡೆ ಮಾಡಲಾಗಿದೆ. ಕಳೆದ ಮೂರು ವರ್ಷಗಳಲ್ಲಿನ ಕಲಿಕಾ ಕೊರತೆಯನ್ನು ಸರಿದೂಗಿಸೋ ನಿಟ್ಟಿನಲ್ಲಿ ಮಹತ್ವದ ಕ್ರಮ ಕೈಗೊಳ್ಳಲಾಗಿದೆ.

ರೈತರಿಗೆ ಮಹತ್ವದ ಮಾಹಿತಿ : ಏಪ್ರಿಲ್ 30ರವರೆಗೆ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಜೋಳ ಖರೀದಿ

ಈ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ( School Education Department ) 2022-23ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ವಾರ್ಷಿಕ ಕಾರ್ಯಸೂಚಿಯನ್ನು ಬಿಡುಗಡೆ ಮಾಡಲಾಗಿದೆ. ಈ ವೇಳಾಪಟ್ಟಿಯಂತೆ ಪ್ರಸಕ್ತ ವರ್ಷವನ್ನು ಕಲಿಕಾ ಚೇತರಿಕೆ ವರ್ಷವೆಂದು ಸಂಕಲ್ಪಿಸಲಾಗಿದ್ದು, ವಾರ್ಷಿಕ ಪಠ್ಯವಸ್ತು ಬೋಧನೆಯನ್ನು ಕಲಿಕಾ ಚೇತರಿಕೆ ಕಾರ್ಯಕ್ರಮದೊಂದಿಗೆ ಸಂಯೋಜಿಸಿ, ವಾರ್ಷಿಕ ಕಾರ್ಯಸೂಚಿಯನ್ನು ತಯಾರಿಸಲಾಗಿದೆ ಎಂದು ತಿಳಿಸಿದೆ.

PM Kusum-C Yojana : ರಾಜ್ಯ ಸರ್ಕಾರದಿಂದ ರೈತ ಸಮುದಾಯಕ್ಕೆ ಗುಡ್ ನ್ಯೂಸ್ : ಹಗಲು ಹೊತ್ತಿನಲ್ಲಿ `3 ಫೇಸ್ ವಿದ್ಯುತ್ `

2022-23ನೇ ಶೈಕ್ಷಣಿಕ ವೇಳಾಪಟ್ಟಿಯಂತೆ ದಿನಾಂಕ 14-05-2022ರಿಂದ ಶಾಲೆ ಪ್ರಾರಂಭ ಮತ್ತು ಪ್ರಾರಂಭೋತ್ಸವದ ಪೂರ್ವ ಸಿದ್ಧತೆ ಆರಂಭಗೊಳ್ಳಲಿದೆ. ದಿನಾಂಕ 16-05-2022ರಿಂದ ಶಾಲಾ ಪ್ರಾರಂಭೋತ್ಸವ ಶುರುವಾಗಲಿದೆ. ಅಲ್ಲದೇ ದಿನಾಂಕ 03-10-2022 ರಿಂದ ದಿನಾಂಕ 16-10-2022ರವರೆಗೆ ದಸರಾ ರಜೆಯನ್ನು ಘೋಷಿಸಲಾಗಿದೆ.

Good News : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಖೇಲೋ ಇಂಡಿಯಾ ಯೋಜನೆಯಡಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗೆ ಅರ್ಜಿ ಆಹ್ವಾನ

ಹೀಗಿದೆ.. 2022-23ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ವಾರ್ಷಿಕ ಕಾರ್ಯಸೂಚಿ ಪಟ್ಟಿ


Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags