Zee News ಕನ್ನಡ

352k Followers

ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯ: ಸರ್ಕಾರದಿಂದ ಅಧಿಕೃತ ಮಾರ್ಗಸೂಚಿ

25 Apr 2022.8:19 PM

ಬೆಂಗಳೂರು: ಕೊರೊನಾ 4ನೇ ಅಲೆ ಬರುವ ಸಾಧ‍್ಯತೆ ಇರುವುದರಿಂದ ರಾಜ್ಯ ಸರ್ಕಾರ ಹೊಸ ಕೋವಿಡ್ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಕಡ್ಡಾಯಗೊಳಿಸಿ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅಧ‍್ಯಕ್ಷತೆಯಲ್ಲಿ ನಡೆದ ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ, ಸಂಚಾರದ ವೇಳೆ ಉಗುಳುವುದನ್ನು ನಿರ್ಬಂಧಿಸಿದ ಆದೇಶಿಸಲಾಗಿದೆ. ಒಂದು ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಸಂಚರಿಸುವ ವೇಳೆ ಉಗುಳಿದರೆ ದಂಡ ವಿಧಿಸಲು ಸ್ಥಳೀಯ ಆಡಳಿತಕ್ಕೆ ಅಧಿಕಾರ ನೀಡಿ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿ ಕುಮಾರ್ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ಮಲಬಾರ್ ಗೋಲ್ಡ್ ಕಂಪನಿ ವಿರುದ್ಧ ಹಿಂದೂ ಸಂಘಟನೆ ಆಕ್ರೋಶ: ಚಿನ್ನ ಖರೀದಿಸದಂತೆ ಎಚ್ಚರಿಕೆ

ರಾಜ್ಯದಲ್ಲಿ ಫೆಬ್ರವರಿ 28ರಿಂದ ಕೋವಿಡ್-19 ನಿರ್ಬಂಧಗಳನ್ನು ತೆಗೆದುಹಾಕಲಾಗಿತ್ತು. ಕೊರೊನಾ ಪ್ರಕರಣಗಳು ಕಡಿಮೆಯಾದ ಕಾರಣ ಸಾರ್ವಜನಿಕರಿಗೆ ಕೋವಿಡ್ ನಿರ್ಬಂಧಗಳನ್ನು ಸಡಿಲಗೊಳಿಸಲಾಗಿತ್ತು. ಪ್ರಸ್ತುತ ದೆಹಲಿ, ಹರಿಯಾಣ ಮತ್ತು ತಮಿಳುನಾಡು ಸೇರಿದಂತೆ ಕೆಲವು ರಾಜ್ಯಗಳಲ್ಲಿ ಪ್ರತಿದಿನ ಕೊರೊನಾ ಪ್ರಕರಣಗಳು ಮತ್ತೆ ಹೆಚ್ಚಳಗೊಳ್ಳುತ್ತಿವೆ.

ಕರ್ನಾಟಕದಲ್ಲಿಯೂ ಪ್ರತಿದಿನ ಕೊರೊನಾ ಪ್ರಕರಣಗಳಲ್ಲಿ ಹೆಚ್ಚಳವಾಗುತ್ತಿದೆ. ಕೊರೊನಾ 4ನೇ ಅಲೆಯ ಭೀತಿ ಹಿನ್ನೆಲೆ ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಮಾಸ್ಕ್ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ. ಕೊರೊನಾ ತಡೆಯುವ ನಿಟ್ಟಿನಲ್ಲಿ ರಾಜ್ಯ ಕೋವಿಡ್-19 ತಾಂತ್ರಿಕ ಸಲಹಾ ಸಮಿತಿಯ ಶಿಫಾರಸ್ಸಿನಂತೆ ರಾಜ್ಯದಲ್ಲಿಯೂ ಮಾಸ್ಕ್ ಧರಿಸುವುದ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ಸರ್ಕಾರದ ಹೊಸ ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಡಿ.ಕೆ.ಶಿವಕುಮಾರ್ ಅವರೇ ಪಿಎಸ್‌ಐ ನೇಮಕಾತಿ ಹಗರಣದ ಆರೋಪಿ: ಬಿಜೆಪಿ ಆರೋಪ

ಸಾರ್ವಜನಿಕರು ಸರ್ಕಾರದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಕೊರೊನಾ 4ನೇ ಅಲೆಯ ಭೀತಿ ಇರುವುದರಿಂದ ಸೂಕ್ತ ಮುಂಜಾಗೃತೆ ಅತ್ಯವಶ್ಯಕವೆಂದು ಜನರಿಗೆ ಸಲಹೆ ನೀಡಲಾಗಿದೆ. ವಿದೇಶಗಳಿಂದ ರಾಜ್ಯಕ್ಕೆ ಮತ್ತು ದೇಶಕ್ಕೆ ಬರುವವರ ಮೇಲೆ ವಿಶೇಷ ನಿಗಾ ಇಡಲಾಗುತ್ತಿದೆ. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮತ್ತೆ ಕೊರೊನಾ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆ ಜನರು ಎಚ್ಚರಿಕೆ ವಹಿಸಬೇಕೆಂದು ತಿಳಿಸಲಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
https://bit.ly/3hDyh4G
https://apple.co/3hEw2hy
Twitter, Facebook, Youtube

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Zee News Kannada

#Hashtags