Kannada News Now

1.8M Followers

BREAKING NEWS: ವಾಹನಗಳ ನೋಂದಣಿ ಫಲಕಗಳ ಮೇಲೆ ಯಾವುದೇ ಹೆಸರು, ಚಿನ್ನೆ, ಲಾಂಛನ ಹಾಕುವಂತಿಲ್ಲ - ರಾಜ್ಯ ಸರ್ಕಾರ ಗೆಜೆಟ್ ಅಧಿಸೂಚನೆ

22 May 2022.2:02 PM

ಬೆಂಗಳೂರು: ರಾಜ್ಯದ ಯಾವುದೇ ವಾಹನಗಳ ನೋಂದಣಿ ಫಲಕಗಳ ಮೇಲೆ ನಿಯಮಬಾಹಿರವಾಗಿ ಪ್ರದರ್ಶಿಸುತ್ತಿರುವ ಸಂಘ, ಸಂಸ್ಥೆಗಳ ಹೆಸರು, ಚಿನ್ನೆ, ಲಾಂಛನವನ್ನು ರಾಜ್ಯ ಸರ್ಕಾರ ಅಧಿಕೃತವಾಗಿ ತೆರವುಗೊಳಿಸುವಂತ ಗೆಜೆಟ್ ಅಧಿಸೂಚನೆಯಲ್ಲಿ ಖಡಕ್ ಆದೇಶ ಹೊರಡಿಸಿದೆ.

ನೀವು ಲ್ಯಾಪ್ ಟಾಪ್, ಮೊಬೈಲ್ ರಿಪೇರಿಗೆ ಕೊಡ್ತಾ ಇದ್ದೀರಾ.? ಅದಕ್ಕೂ ಮುನ್ನಾ ಈ ಸುದ್ದಿ ಓದಿ.!

ಈ ಕುರಿತಂತೆ ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಅವರು, ಕರ್ನಾಟಕ ರಾಜ್ಯಪತ್ರದಲ್ಲಿ ಸುತ್ತೋಲೆ ಹೊರಡಿಸಿದ್ದು, ವಾಹನಗಳ ನೋಂದಣಿ ಸಂಖ್ಯಾ ಫಲಕಗಳನ್ನು ಕೇಂದ್ರ ಮೋಟಾರು ವಾಹನಗಳ ನಿಯಮದ ಮಾನದಂಡಗಳಿಗೆ ಅನುಗುಣವಾಗಿ ಅಳವಡಿಸಬೇಕಾಗಿರುತ್ತದೆ ಎಂದು ತಿಳಿಸಿದ್ದಾರೆ.

'ಸಿಲಿಕಾನ್‌ ಸಿಟಿ'ಯನ್ನು 'ಸ್ವಿಮ್ಮಿಂಗ್‌ ಪೂಲ್‌' ಮಾಡಿದ ಹೆಗ್ಗಳಿಕೆ 'ಬಿಜೆಪಿ ಸರ್ಕಾರ'ದ್ದು - ಮಾಜಿ ಸಿಎಂ HDK

ಖಾಸಗಿ ವಾಹನಗಳು ಸರ್ಕಾರದ ಲಾಂಛನ ಮತ್ತು ಹೆಸರುಗಳನ್ನು ವಾಹನಗಳ ಮೇಲೆ ಪ್ರದರ್ಶಿಸುವುದನ್ನು ನಿರ್ಬಂಧಿಸಲಾಗಿದೆ. ತಮ್ಮ ವಾಹನಗಳ ಮೇಲೆ ಸರ್ಕಾರಿ ಲಾಂಛನ ಅಥವಾ ಹೆಸರುಗಳನ್ನು ಅಳವಡಿಸಬೇಕಾದಲ್ಲಿ, ಕೇಂದ್ರ ಸರ್ಕಾರದಿಂದ ಅನುಮತಿ ಪಡೆದುಕೊಳ್ಳುವುದು ಅವಶ್ಯಕವಾಗಿರುತ್ತದೆ ಎಂದಿದ್ದಾರೆ.

ಟ್ರಕ್ ಗೆ ಕಾರು ಡಿಕ್ಕಿಯಾಗಿ ಭೀಕರ ಅಪಘಾತ: 8 ಮಂದಿ ಸ್ಥಳದಲ್ಲೇ ಸಾವು

ಈ ಬಗ್ಗೆ ಕೋರ್ಟ್ ಆದೇಶ ಕೂಡ ಇದ್ದು, ಸರ್ಕಾರದ ಲಾಂಛನಗಳನ್ನು ಉಪಯೋಗಿಸದಂತೆ ಹಾಗೂ ವಾಹನಗಳ ಮೇಲೆ ನಿಗಮ, ಮಂಡಳಿ ಮತ್ತು ಸಂಸ್ಥೆಗಳ ಹೆಸರುಗಳನ್ನು ಬರೆದ ಯಾವುದೇ ತರಹದ ಫಲಕ ಅಥವಾ ಬರಹಗಳನ್ನು ಅಳವಡಿಸಬಹಾದು ಎಂದು ಸ್ಪಷ್ಟ ಆದೇಶ ಮಾಡಿದೆ. ಮಾನ್ಯ ನ್ಯಾಯಾಲಯದ ಆದೇಶದಂತೆ ಸೂಕ್ತ ಕ್ರಮ ತೆಗೆದುಕೊಂಡು, ತ್ವರಿತವಾಗಿ ಅನಧಿಕೃತ ಫಲಕಗಳನ್ನು ತೆರವುಗೊಳಿಸಲು ಮತ್ತು ತೆಗೆದುಕೊಂಡ ಕ್ರಮಗಳ ವಿವರಗಳನ್ನು ಮಾಹಿತಿ ರೂಪದಲ್ಲಿ ನೀಡಲು ತಿಳಿಸಿದ್ದಾರೆ.


Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags