News18 ಕನ್ನಡ

400k Followers

SSLC Result: ಮುಂದಿನ ವಾರ ಹೊರಬೀಳಲಿದೆ SSLC ಫಲಿತಾಂಶ; ರಿಸಲ್ಟ್​ ನೋಡಲು ಹೀಗೆ ಮಾಡಿ

12 May 2022.3:43 PM

ಬೆಂಗಳೂರು (ಮೇ.12): ಮುಂದಿನ ವಾರ SSLC ಫಲಿತಾಂಶ ಪ್ರಕಟವಾಗಲಿದೆ. ಮೇ ಮೊದಲ ಅಥವಾ 2ನೇ ವಾರದಲ್ಲಿ SSLC ಫಲಿತಾಂಶ ಹೊರಬೀಳಬೇಕಿತ್ತು. ಆದ್ರೆ, ಕೆಲವೊಂದು ಕಾರಣಗಳಿಂದ SSLC ಫಲಿತಾಂಶ (Result) ತಡವಾಗಿದ್ದು, ಮುಂದಿನ ವಾರ (Next Week) ಫಲಿತಾಂಶ ಪ್ರಕಟ ಮಾಡೋದಾಗಿ ಸಚಿವ ಬಿ.ಸಿ ನಾಗೇಶ್ (B.C Nagesh) ತಿಳಿಸಿದ್ದಾರೆ. ಮೇ 19ಕ್ಕೆ SSLC ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ. ವಿದ್ಯಾರ್ಥಿಗಳು ಫಲಿತಾಂಶವನ್ನು https://sslc.karnataka.gov.in/ ಅಥವಾ https://karresults.nic.in/ ಗೆ ಭೇಟಿ ನೀಡಿ ಚೆಕ್‌ ಮಾಡಬಹುದಾಗಿದೆ.

ಮೇ 19ಕ್ಕೆ ಫಲಿತಾಂಶ ಪ್ರಕಟವಾಗೋ ಸಾಧ್ಯತೆ

ಮೌಲ್ಯಮಾಪನ ನಿರೀಕ್ಷೆಗಿಂತ ತಡವಾಗಿ ಪೂರ್ಣಗೊಂಡಿದೆ. ಬಳಿಕ ಮೌಲ್ಯಮಾಪನದಲ್ಲಿ ಸಣ್ಣ ಪುಟ್ಟ ದೋಷಗಳು, ಕಣ್ತಪ್ಪುಗಳಿದ್ದಲ್ಲಿ ಅವುಗಳನ್ನು ಸರಿಪಡಿಸುವ ಕಾರ್ಯ ನಡೆಸಲಾಗುತ್ತಿದೆ. ಇದಾದ ನಂತರ ಅಂಕಗಳ ದಾಖಲೀಕರಣ ಸೇರಿದಂತೆ ಫಲಿತಾಂಶ ಪ್ರಕಟಿಸಲು ಪೂರ್ಣ ಸಿದ್ಧತೆ ಮಾಡಿಕೊಳ್ಳಲಾಗುತ್ತದೆ. ಇದಕ್ಕೆ ಇನ್ನೂ ಒಂದು ವಾರ ಸಮಯಾವಕಾಶ ಬೇಕಾಗುತ್ತದೆ. ಹಾಗಾಗಿ ಮೇ 19ರ ಹೊತ್ತಿಗೆ ಫಲಿತಾಂಶ ನೀಡಲು ಯತ್ನಿಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕರ್ನಾಟಕ SSLC 10 ನೇ ಫಲಿತಾಂಶ 2022: ಪರಿಶೀಲಿಸಲು ಕ್ರಮಗಳು

ಹಂತ 1. ಅಧಿಕೃತ ವೆಬ್‌ಸೈಟ್ KB - sslc.karnataka.gov.in ಗೆ ಹೋಗಿ

ಹಂತ 2. ಮುಖಪುಟದಲ್ಲಿ SSLC 10 ನೇ ಪರೀಕ್ಷೆಯ ಫಲಿತಾಂಶ 2022 ಲಿಂಕ್ ಅನ್ನು ಕ್ಲಿಕ್ ಮಾಡಿ

ಹಂತ 3. ಲಾಗಿನ್ ID ನಮೂದಿಸಿ- ನೋಂದಣಿ ಸಂಖ್ಯೆ/ ರೋಲ್ ಸಂಖ್ಯೆ ಹಾಕಿ

ಹಂತ 4. ನಿಮ್ಮ SSLC ಫಲಿತಾಂಶ ಸ್ಕ್ರೀನ್​ ಮೇಲೆ ಕಾಣಿಸುತ್ತದೆ

ಹಂತ 5. ಡೌನ್‌ಲೋಡ್ ಮಾಡಿ ಮತ್ತು ಹೆಚ್ಚಿನ ಮಾಹಿತಿಗಾಗಿ ಪ್ರಿಂಟ್ ಔಟ್ ತೆಗೆದುಕೊಳ್ಳಿ

ಹೊರಬೀಳಲಿದೆ 8.73 ಲಕ್ಷ ವಿದ್ಯಾರ್ಥಿಗಳ ಫಲಿತಾಂಶ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಏಪ್ರಿಲ್ 11 ರಂದು ಮುಕ್ತಾಯಗೊಂಡಿದ್ದು, ಈ ಬಾರಿ ರಾಜ್ಯದ ಒಟ್ಟು 15,387 ಶಾಲೆಗಳ 8.73 ಲಕ್ಷ ವಿದ್ಯಾರ್ಥಿಗಳು SSLC ಪರೀಕ್ಷೆ ಬರೆದಿದ್ದರು. ರಾಜ್ಯಾದ್ಯಂತ 3,446 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಸುಮಾರು 234 ಕೇಂದ್ರಗಳಲ್ಲಿ ನಡೆದ ಮೌಲ್ಯಮಾಪನ ಪ್ರಕ್ರಿಯೆಯಲ್ಲಿ 63,796 ಶಿಕ್ಷಕರು ಭಾಗಿಯಾಗಿದ್ದಾರೆ.

ಈ ಬಾರಿ ವಿದ್ಯಾರ್ಥಿಗಳಿಗೆ ಸಿಗಲಿದೆ ಗ್ರೇಸ್ ಮಾರ್ಕ್ಸ್​

SSLC ಪೇಲ್‌ ಕಡಿಮೆ ಮಾಡಲು 10% ಗ್ರೇಸ್ ಮಾರ್ಕ್ ನೀಡಲು ಶಿಕ್ಷಣ ಇಲಾಖೆ ಮುಂದಾಗಿದೆ. SSLC ಫಲಿತಾಂಶಕ್ಕಾಗಿ ಕಾಯುತ್ತಿರುವ ರಾಜ್ಯದ ವಿದ್ಯಾರ್ಥಿಗಳಿಗೆ ಸಂತಸದ ಸುದ್ದಿ. ಉತ್ತೀರ್ಣಕ್ಕೆ ಬೆರಳೆಣಿಕೆಯಷ್ಟು ಅಂಕಗಳ ಕೊರತೆ ಹೊಂದಿರುವವರಿಗೆ ಈ ಬಾರಿಯೂ ಗರಿಷ್ಠ 3 ವಿಷಯದಲ್ಲಿ ಶೇ.10ರಷ್ಟು ಗ್ರೇಸ್‌ ಅಂಕ ನೀಡಿ ಪಾಸ್‌ ಮಾಡಲು ಸರ್ಕಾರ ತೀರ್ಮಾನಿಸಿದೆ.

ಅನುತ್ತೀರ್ಣವಾಗಿರುವ ಯಾವುದಾದರೂ ಮೂರು ವಿಷಯಗಳ ಥಿಯರಿ ಪರೀಕ್ಷೆಯ ಒಟ್ಟು ಅಂಕಗಳಲ್ಲಿನ ಶೇ.10 ಗ್ರೇಸ್​ ಮಾರ್ಕ್ಸ್​ಗಳನ್ನು ಅಗತ್ಯವಾರು ಹಂಚಿಕೆ ಮಾಡಿದಾಗ ವಿದ್ಯಾರ್ಥಿ ಪಾಸಾಗುವುದಾದರೆ ಮಾತ್ರ ಇದರ ಉಪಯೋಗ ಸಿಗಲಿದೆ.

ಯಾರಿಗೆ ಸಿಗಲಿದೆ ಗ್ರೇಸ್ ಮಾರ್ಕ್ಸ್?

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅನುತ್ತೀರ್ಣವಾಗಿರುವ ಯಾವುದಾದರೂ ಮೂರು ವಿಷಯಗಳ ಥಿಯರಿ ಪರೀಕ್ಷೆಯ ಒಟ್ಟು ಅಂಕಗಳಲ್ಲಿನ ಶೇ.10 ಕೃಪಾಂಕಗಳನ್ನು ಅಗತ್ಯವಾರು ಹಂಚಿಕೆ ಮಾಡಿದಾಗ ವಿದ್ಯಾರ್ಥಿ ಪಾಸಾಗುವುದಾದರೆ ಮಾತ್ರ ಇದರ ಉಪಯೋಗ ಸಿಗಲಿದೆ. ಪರೀಕ್ಷೆ ಬರೆದಿರುವ ಆರು ವಿಷಯಗಳ ಪೈಕಿ ಮೂರು ವಿಷಯಗಳಲ್ಲಿ ಉತ್ತೀರ್ಣರಾಗಿದ್ದು, ಇನ್ನುಳಿದ ಮೂರು ವಿಷಯಗಳಲ್ಲಿ ಅನುತ್ತಿರ್ಣವಾಗಿದ್ದರೆ ಆ ಮೂರು ವಿಷಯಗಳಲ್ಲಿ ಥಿಯರಿ ಪರೀಕ್ಷೆಯ ತಲಾ 80 ಅಂಕದ ಶೇ.10ರಷ್ಟು ಅಂದರೆ ಮೂರು ವಿಷಯಗಳಿಂದ 24 ಅಂಕಗಳು ಗ್ರೇಸ್‌ ಅಂಕಗಳಾಗಿ ದೊರೆಯುತ್ತವೆ.


ಗ್ರೇಸ್ ಮಾರ್ಕ್ಸ್ ಹಂಚಿಕೆ ಮಾಡುವುದು ಹೇಗೆ?

ಕನ್ನಡ ಭಾಷಾ ವಿಷಯಕ್ಕೆ 100 ಅಂಕಗಳಿಗೆ ಥಿಯರಿ ಪರೀಕ್ಷೆ ಇರುವುದರಿಂದ ಶೇ.10 ಅಂದರೆ 10 ಅಂಕಗಳಾಗುತ್ತದೆ. ಹಾಗಾಗಿ ಅನುತ್ತೀರ್ಣ ವಿಷಯಗಳಲ್ಲಿ ಪ್ರಥಮ ಭಾಷೆ ಕನ್ನಡ ಇದ್ದಲ್ಲಿ ಮೂರು ವಿಷಯಗಳ ಕೃಪಾಂಕ ಸಂಖ್ಯೆ ಆಗ 26 ಆಗಲಿದೆ. ಈ ಅಂಕಗಳನ್ನು ಅನುತ್ತೀರ್ಣ ವಿಷಯಗಳಿಗೆ ಹಂಚಿಕೆ ಮಾಡಿ ಪಾಸು ಮಾಡಲಾಗುತ್ತದೆ. ಆದರೆ, ಈ ಗ್ರೇಸ್‌ ಅಂಕಗಳನ್ನುಯಾವ ರೀತಿ ಹಂಚಿಕೆ ಮಾಡಲಾಗುತ್ತದೆ ಎಂಬುದನ್ನು ಇನ್ನೂ ಬಹಿರಂಗಪಡಿಸಿಲ್ಲ.
Disclaimer

Disclaimer

This story is auto-aggregated by a computer program and has not been created or edited by Dailyhunt Publisher: News18 Kannada

#Hashtags