Kannada News Now

1.8M Followers

BREAKING NEWS: ಪದವೀಧರ, ಶಿಕ್ಷಕರ ಪರಿಷತ್ ಚುನಾವಣೆ: ರಾಜ್ಯ ಸರ್ಕಾರದಿಂದ ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆ ನೀಡಿ ಆದೇಶ

10 Jun 2022.3:08 PM

ಬೆಂಗಳೂರು: 2 ಪದವೀಧರ ಹಾಗೂ 2 ಶಿಕ್ಷಕರ ಕ್ಷೇತ್ರಗಳಿಗೆ ವಿಧಾನ ಪರಿಷತ್ ಚುನಾವಣೆ ( Graduate, Teachers' Council elections ) ದಿನಾಂಕ 13-06-2022ರಂದು ನಡೆಯಲಿದೆ. ಈ ಹಿನ್ನಲೆಯಲ್ಲಿ ಅಂದು ರಾಜ್ಯ ಸರ್ಕಾರದಿಂದ ಮತದಾನದಲ್ಲಿ ಭಾಗಿಯಾಗಲಿರುವಂತ ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆಯನ್ನು ( Special casual leave ) ನೀಡಿ, ರಾಜ್ಯ ಸರ್ಕಾರ ಆದೇಶಿಸಿದೆ.

BIG NEWS: ನಾನು 'ಜೆಡಿಎಸ್'ಗೆ ಮತ ಹಾಕಿದ್ದೇನೆ - ಗುಬ್ಬಿ ಶಾಸಕ ಶ್ರೀನಿವಾಸ್ | Rajya Sabha Election

ಈ ಕುರಿತು ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ದಿನಾಂಕ 13-06-2022ರಂದು ವಿಧಾನಪರಿಷತ್ತಿನ ವಾಯುವ್ಯ ಪದವೀಧರ ಕ್ಷೇತ್ರ, ದಕ್ಷಿಣ ಪದವೀಧರ ಕ್ಷೇತ್ರ ಹಾಗೂ ವಾಯುವ್ಯ ಶಿಕ್ಷಕರ, ಪಶ್ಚಿಮ ಶಿಕ್ಷಕರ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ ಎಂದು ತಿಳಿಸಿದ್ದಾರೆ.

BIG NEWS: ಮಾನ ಮರ್ಯಾದೆ ಇದ್ದರೇ ಪಕ್ಷ ಬಿಟ್ಟು ಹೋಗು: ಜೆಡಿಎಸ್ ಶಾಸಕ ಶ್ರೀನಿವಾಸ್ ಗೌಡ ವಿರುದ್ಧ HDK ಕೆಂಡ

ಮತದಾನ ನಡೆಯಲಿರುವಂತ ವಾಯುವ್ಯ ಪದವೀಧರ ಕ್ಷೇತ್ರದ ವಿಜಯಪುರ, ಬಾಗಲಕೋಟೆ ಮತ್ತು ಬೆಳಗಾವಿ, ದಕ್ಷಿಣ ಪದವೀಧರ ಕ್ಷೇತ್ರದ ಮೈಸೂರು, ಚಾಮರಾಜನಗರ, ಮಂಡ್ಯ ಮತ್ತು ಹಾಸನ ಜಿಲ್ಲೆಗಳು, ವಾಯುವ್ಯ ಶಿಕ್ಷಕರ ಕ್ಷೇತ್ರದ ವಿಜಯಪುರ, ಬಾಗಲಕೋಟೆ ಮತ್ತು ಬೆಳಗಾವಿ, ಪಶ್ಚಿಮ ಶಿಕ್ಷಕರ ಕ್ಷೇತ್ರದ ಧಾರವಾಡ, ಹಾವೇರಿ, ಗದಗ ಮತ್ತು ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿಯಲ್ಲಿ ನಡೆಯಲಿದೆ.

ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ

ಈ ಚುನಾವಣೆ ಕ್ಷೇತ್ರವ್ಯಾಪ್ತಿಯಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲಾ-ಕಾಲೇಜು ( School and College ), ಅನುದಾನಿತ, ಅನುದಾನ ರಹಿತ ವಿದ್ಯಾ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರ ಬ್ಯಾಂಕ್ ಗಳು ಸೇರಿದಂತೆ ಖಾಸಗಿ ಕಾರ್ಖಾನೆಗಳು, ಸಹಕಾರಿ ಸಂಘ-ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಂತ ಅರ್ಹ ಮತದಾರರಿಗೆ ಮಾತ್ರವೇ, ಮತದಾನಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ, ದಿನಾಂಕ 13-06-2022ರ ಸೋಮವಾರದಂದು ವಿಶೇಷ ಸಾಂದರ್ಭಿಕ ರಜೆಯನ್ನು ( Holiday ) ಮಂಜೂರು ಮಾಡಿ, ಆದೇಶಿಸಿದ್ದಾರೆ.



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags