Kannada News Now

1.8M Followers

Good News : ಸರ್ಕಾರಿ ಶಾಲಾ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿ : ರಾಜ್ಯ ಸರ್ಕಾರದಿಂದ 'ಶಾಲಾ ವಾಹನ' ಖರೀದಿಗೆ ಅನುಮತಿ

02 Jul 2022.06:35 AM

ಬೆಂಗಳೂರು: ಸರ್ಕಾರಿ ಶಾಲೆಗಳಿಗೆ ಶಾಲಾ ಮಕ್ಕಳನ್ನು ( School Children ) ದೂರದ ಊರುಗಳಿಂದ ಕರೆದುಕೊಂಡು ಬರೋದಕ್ಕೆ ಶಾಲಾ ವಾಹನ ( School Vehicle ) ಖರೀದಿ ಮಾಡಲು ರಾಜ್ಯ ಸರ್ಕಾರ ( Karnataka Government ) ಅವಕಾಶ ನೀಡಿದೆ.

ಈ ಮೂಲಕ ಸರ್ಕಾರಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ ನೀಡಿದೆ.

BIGG NEWS : ಪಿಯು ಕಾಲೇಜಿನ ಅತಿಥಿ ಉಪನ್ಯಾಸಕರಿಗೆ ಸಿಹಿಸುದ್ದಿ : ಗೌರವಧನ 15 ಸಾವಿರ ರೂ.ಗೆ ಹೆಚ್ಚಳ!

ಈ ಬಗ್ಗೆ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಅಧಿಕೃತ ಜ್ಞಾಪನೆ ಹೊರಡಿಸಿದ್ದು, ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಪರಿಷ್ಕೃತ ಯೋಜನೆಯ ಮಾರ್ಗಸೂಚಿಗಳು 2014ರಲ್ಲಿನ ಅನುಬಂಧ-|||ರಡಿ ಈ ಕೆಳಕಂಡ ಅಂಶಗಳನ್ನು ಸೇರ್ಪಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಸರ್ಕಾರಿ ಶಾಲೆಗಳಿಗೆ ಮಾತ್ರ ಶಾಲಾ-ವಾಹನವನ್ನು ಮಕ್ಕಳನ್ನು ಕರೆತರುವ ಸಲುವಾಗಿ ಖರೀದಿಸಲು ತಗಲುವ ವೆಚ್ಚವನ್ನು ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಭರಿಸಲು ಅವಕಾಶ ಕಲ್ಪಿಸಲಾಗಿದೆ ಎಂದಿದ್ದಾರೆ.

ಅಂದಹಾಗೇ ಶಾಲಾ ವಾಹನಕ್ಕೆ, ವಾಹನ ಚಾಲಕರ ವೇತನ ಹಾಗೂ ಪೆಟ್ರೋಲ್, ಡೀಸೆಲ್, ದುರಸ್ಥಿ ವೆಚ್ಚಗಳನ್ನು ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯು ( SDMC) ಇತರೆ ಅನುದಾನದಡಿ ವೆಚ್ಚ ಭರಿಸುವಂತೆ ಷರತ್ತು ವಿಧಿಸಿದೆ.

Rain In Karnataka : ರಾಜ್ಯದಲ್ಲಿ ಇನ್ನೂ 4 ದಿನ ಭಾರೀ ಮಳೆ : ಈ ಜಿಲ್ಲೆಗಳಲ್ಲಿ `ಯೆಲ್ಲೋ-ಆರೆಂಜ್ ಅಲರ್ಟ್' ಘೋಷಣೆ



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags