Kannada News Now

1.8M Followers

BREAKING NEWS: ಭಾರೀ ಮಳೆ ಹಿನ್ನಲೆ: ಜು.9ರವರೆಗೆ ಚಿಕ್ಕಮಗಳೂರು ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ

05 Jul 2022.6:08 PM

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಬಿಟ್ಟು ಬಿಡದೇ ಸುರಿಯುತ್ತಿರುವಂತ ಭಾರೀ ಮಳೆಯಿಂದಾಗಿ ( Heavy Rain ) ಇಂದು ಹಾಗೂ ನಾಳೆ ಜಿಲ್ಲಾಡಳಿತದಿಂದ ಮುಂಜಾಗ್ರತಾ ಕ್ರಮವಾಗಿ ಪ್ರಾಥಮಿಕ ಶಾಲೆಯಿಂದ ಪ್ರೌಢ ಶಾಲೆಯವರೆಗಿನ ಶಾಲೆಗಳಿಗೆ ರಜೆಯನ್ನು ( School Holiday ) ಘೋಷಿಸಲಾಗಿತ್ತು.

ಇದೀಗ ಮತ್ತೆ ರಜೆಯನ್ನು ಜುಲೈ.9ರವರೆಗೆ ವಿಸ್ತರಿಸಿದೆ.

ಶಿವಮೊಗ್ಗ: ಜೋಗ್ ಜಲಪಾತದ ಬಳಿಯ ಹಿನ್ನೀರಿನಲ್ಲಿ ಕಾಲು ಜಾರಿ ಬಿದ್ದು ಮಹಿಳೆ ಸಾವು

ಈ ಕುರಿತಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದು ಚಿಕ್ಕಮಗಳೂರು ಜಿಲ್ಲೆಯಲ್ಲಿ ( Chikkamagaluru District ) ತೀವ್ರವಾಗಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಅಭಿಪ್ರಯಾದಂತೆ ಮೂಡಿಗೆರೆ ತಾಲೂಕಿನ ಬಾಳೂರು ಹೋಬಳಿ, ಕಳಸ ತಾಲೂಕು ಹಾಗೂ ಶೃಂಗೇರಿ ವ್ಯಾಪ್ತಿಯಲ್ಲಿನ ಶೈಕ್ಷಣಿಕ ವಿದ್ಯಾಸಂಸ್ಥೆಗಳಿಗೆ ( ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಂಸ್ಥೆ ) ದಿನಾಂಕ 05-07-2022 ಮತ್ತು 06-07-2022ರಂದು ರಜೆ ಘೋಷಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

'ಕನ್ನಡ ಸಾಹಿತ್ಯ ಪರಿಷತ್'ನಿಂದ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ

ಇನ್ನೂ ಮಳೆಯು ನಿರಂತರವಾಗಿ ಬೀಳುತ್ತಿರುವದರಿಂದ ಮಲೆನಾಡು ಭಾಗದ ಶೈಕ್ಷಣಿಕ ವಿದ್ಯಾಸಂಸ್ಥೆಗಳಿಗೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ 06-07-2022ರಿಂದ ದಿನಾಂಕ 09-07-2022ರವರೆಗೆ ರಜೆ ಘೋಷಿಸುವುದು ಅವಶ್ಯಕವೆಂದು ಶಿಕ್ಷಣ ಇಲಾಖೆಯು ಪ್ರಸ್ತಾವನೆಯನ್ನು ಸಲ್ಲಿಸಿದೆ.

HEALTH TIPS: ಮಧುಮೇಹ ನಿಯಂತ್ರಣಕ್ಕೆ ಗಿಡಮೂಲಿಕೆಗಳೇ ಮದ್ದು; ಈ ಬಗ್ಗೆ ವೈದ್ಯರು ಏನು ಹೇಳುತ್ತಾರೆ ಗೊತ್ತಾ? |Diabetes

ಈ ಹಿನ್ನಲೆಯಲ್ಲಿ ದಿನಾಂಕ 06-07-2022ರಿಂದ ದಿನಾಂಕ 09-07-2022ರವರೆಗೆ ಚಿಕ್ಕಮಗಳೂರು ತಾಲೂಕು ವ್ಯಾಪ್ತಿಯ ಆಂಬಳೆ ಹಾಗೂ ಲಕ್ಕಾ ಹೋಬಳಿ ಹೊರತು ಪಡಿಸಿದ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಮೂಡಿಗೆರೆ, ಕೊಪ್ಪ, ಶೃಂಗೇರಿ, ಕಳಸ ಮತ್ತು ಎನ್ ಆರ್ ಪುರ ತಾಲೂಕು ವ್ಯಾಪ್ತಿಯ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ವರದಿ : ರಂಜಿತ್, ಶೃಂಗೇರಿ



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags