Kannada News Now

1.8M Followers

BIGG NEWS : ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ : ಡಿಸೆಂಬರ್ 31 ರೊಳಗೆ 'CLT ಪರೀಕ್ಷೆ ಪಾಸ್' ಕಡ್ಡಾಯ : ರಾಜ್ಯ ಸರ್ಕಾರ ಆದೇಶ

25 Jun 2022.06:14 AM

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ದಿನಾಂಕ 31-12-2022ರೊಳಗಾಗಿ ಪಾಸ್ ಮಾಡುವುದು ಕಡ್ಡಾಯವಾಗಿದೆ. ಈ ದಿನಾಂಕದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂಬುದಾಗಿ ರಾಜ್ಯ ಸರ್ಕಾರ ಸ್ಪಷ್ಟ ಪಡಿಸಿದೆ.

BIGG NEWS : `ಪ್ರಾಥಮಿಕ, ಪ್ರೌಢ ಶಿಕ್ಷಣ' ಇನ್ನುಂದೆ `ಶಾಲಾ ಶಿಕ್ಷಣ ಇಲಾಖೆ' : ರಾಜ್ಯ ಸರ್ಕಾರದಿಂದ ಆದೇಶ

ಈ ಕುರಿತಂತೆ ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ದಿನಾಂಕ 05-05-2022ರಲ್ಲಿ ಕರ್ನಾಟಕ ನಾಗರಿಕ ಸೇವಾ ( ಕಂಪ್ಯೂಟರ್ ಸಾಕ್ಷರತಾ ) ಪರೀಕ್ಷೆ ನಿಯಮಗಳು 2021ರ ನಿಯಮ 3(ಬಿ)ಕ್ಕೆ ಮಾಡಿರುವ ತಿದ್ದು ಪಡಿ ಅನ್ವಯ ದಿನಾಂಕ 31-12-2022ರೊಳಗೆ ಕಂಪ್ಯೂಟರ್ ಸಾಕ್ಷರತೆ ಪರೀಕ್ಷೆ ಪಾಸ್ ಮಾಡುವುದು ಕಡ್ಡಾಯವೆಂದು ತಿಳಿಸಿದ್ದಾರೆ.

BIGG NEWS : ಜೂನ್ 27 ರಿಂದ `SSLC' ಪೂರಕ ಪರೀಕ್ಷೆ : ವಿದ್ಯಾರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ|'SSLC' Supplementary Exam

ಈ ಹಿನ್ನಲೆಯಲ್ಲಿ ಈ ದಿನಾಂಕದಲ್ಲಿ ಯಾವುದೇ ಬದಲಾವಣೆ ಇಲ್ಲ. ಇದಕ್ಕಾಗಿ ಹೆಚ್ಚುವರಿ ಅನುದಾನ ಕೂಡ ಕಿಯೋನಿಕ್ಸ್ ಕೋರಬಾರದು. ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ದಿನಾಂಕ 01-04-2022 ರಿಂದ 31-12-2022ರೊಳಗೆ ಮಾತ್ರ ವಿಸ್ತರಿಸಲು ಸರ್ಕಾರ ಆದೇಶಿಸಿದೆ ಎಂದಿದ್ದಾರೆ.



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags