Good Returns

51k Followers

RBI Monetary Policy : ರೆಪೋ ದರ ಮತ್ತೆ 50 ಮೂಲಾಂಕ ಏರಿಸಿದ ಆರ್‌ಬಿಐ

30 Sep 2022.11:24 AM

ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ರೆಪೋ ದರವನ್ನು ಮತ್ತೆ ಏರಿಕೆ ಮಾಡಿದೆ. ಆರ್‌ಬಿಐ ರೆಪೋ ದರವನ್ನು 50 ಮೂಲಾಂಕ ಏರಿಕೆ ಮಾಡಿದ್ದು, ಶೇಕಡ 5.9ಕ್ಕೆ ತಲುಪಿದೆ. ಈ ಹಿಂದೆ ಮೂರು ಬಾರಿ ಆರ್‌ಬಿಐ ರೆಪೋ ದರ ಹೆಚ್ಚಳ ಮಾಡಿತ್ತು. ನಾಲ್ಕನೇ ಬಾರಿಗೆ ನಿರೀಕ್ಷೆಯಂತೆಯೇ ದರ ಏರಿಸಿದೆ.

ದೇಶದಲ್ಲಿ ಹಣದುಬ್ಬರವನ್ನು ಹತೋಟಿಗೆ ತರುವ ನಿಟ್ಟಿನಲ್ಲಿ ಆರ್‌ಬಿಯ ಹಲವು ಬಾರಿ ರೆಪೋ ದರವನ್ನು ಏರಿಕೆ ಮಾಡಿದೆ. ಏಪ್ರಿಲ್‌ನಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್‌ನ (ಆರ್‌ಬಿಐ) ಸತತ 10 ಬಾರಿಯೂ ರೆಪೋ ದರದಲ್ಲಿ ಯಥಾಸ್ಥಿತಿಯನ್ನು ಕಾಯ್ದುಕೊಂಡಿತ್ತು. ಆದರೆ ಹಣದುಬ್ಬರವನ್ನು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಮೇ ತಿಂಗಳಿನಲ್ಲಿ ಆರ್‌ಬಿಐ ರೆಪೋ ದರವನ್ನು ಕೂಡಲೇ ಜಾರಿಗೆ ಬರುವಂತೆ ಏರಿಕೆ ಮಾಡಿತ್ತು.

Breaking news: ರೆಪೋ ದರ ಮತ್ತೆ ಏರಿಸಿದ ಆರ್‌ಬಿಐ

ಆ ಬಳಿಕ ಆರ್‌ಬಿಐ ಜೂನ್‌ ತಿಂಗಳಿನಲ್ಲಿ ಮತ್ತೆ ರೆಪೋ ದರ ಹೆಚ್ಚಳ ಮಾಡಿತ್ತು. ಜೂನ್‌ನಲ್ಲಿ ರೆಪೋ ದರವನ್ನು ಆರ್‌ಬಿಐ 50 ಮೂಲಾಂಕ ಏರಿಕೆ ಮಾಡಿದ್ದು, ಶೇಕಡ 4.90ಕ್ಕೆ ತಲುಪಿತ್ತು. ಆಗಸ್ಟ್‌ನಲ್ಲಿ ಮತ್ತೆ 50 ಮೂಲಾಂಕ ಏರಿಕೆ ಮಾಡಲಾಗಿತ್ತು. ಈಗ ಮತ್ತೆ ಸೆಪ್ಟೆಂಬರ್‌ನಲ್ಲಿ ರೆಪೋ ದರವನ್ನು ಹೆಚ್ಚಳ ಮಾಡಲಾಗಿದೆ.

ರೆಪೋ ದರ ಎಂದರೇನು?

ರೆಪೋ ದರ ಎಂದರೆ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ದೇಶದ ವಾಣಿಜ್ಯ ಬ್ಯಾಂಕುಗಳಿಗೆ ಕೊಡುವ ಸಾಲದ ಮೇಲಿನ ಬಡ್ಡಿ ದರವೇ ರೆಪೋ ರೇಟ್. ವಾಣಿಜ್ಯ ಬ್ಯಾಂಕುಗಳು ತಮ್ಮಲ್ಲಿ ಹಣದ ಕೊರತೆಯಾದಾಗ ಆರ್‌ಬಿಐನಿಂದ ಹಣ ಪಡೆಯುತ್ತವೆ. ಈ ಹಣಕ್ಕೆ ಬಡ್ಡಿ ನೀಡುವ ದರ ಇದಾಗಿದೆ.

ರೆಪೋ ದರ ಏರಿಕೆ ಸುಳಿವು ನೀಡಿದ ತಜ್ಞರು

ಈ ಹಿಂದೆಯೇ ಹಲವಾರು ತಜ್ಞರುಗಳು ರೆಪೋ ದರವನ್ನು ಹೆಚ್ಚಳ ಮಾಡಲಾಗುವುದು ಎಂದು ಸೂಚನೆಯನ್ನು ನೀಡಿದ್ದರು. ಆಗಸ್ಟ್‌ನಲ್ಲಿ ಮತ್ತೆ ರಿಟೇಲ್ ಹಣದುಬ್ಬರ ಅಧಿಕವಾಗಿದೆ. ಈ ಬೆನ್ನಲ್ಲೇ ಆರ್‌ಬಿಐ ವಿತ್ತೀಯ ನೀತಿಯಲ್ಲಿ ಬದಲಾವಣೆ ತರುವ ನಿರೀಕ್ಷೆ ಇತ್ತು. ಮೇ ಬಳಿಕ ಸತತ ನಾಲ್ಕು ಬಾರಿ ಆರ್‌ಬಿಐ ರೆಪೋ ದರವನ್ನು ಏರಿಸಿದೆ. ಇನ್ನು ಇದರ ಪರಿಣಾಮ ರೆಪೋ ಆಧಾರಿತ ಬಡ್ಡಿದರದ ಮೇಲೆ ಸಾಲ ಪಡೆದವರ ಮೇಲೆ ಬೀಳಲಿದೆ. ಇಎಂಐ ಹೊರೆ ಅಧಿಕವಾಗಲಿದೆ.

By Mayuri N Goodreturns

source: goodreturns.in

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Goodreturns Kannada

#Hashtags